ದುಂದುವೆಚ್ಚದಿಂದಲೂ ಆತ್ಮಹತ್ಯೆ ವೀರಪ್ಪ ಮೊಯ್ಲಿ ಪ್ರತಿಪಾದನೆ
ರೈತರು ಆತ್ಮಹತ್ಯೆ ಮಾಡಿಕೊಳ್ಳಲು ದುಂದು ವೆಚ್ಚಗಳೂ ಕಾರಣವಾಗಿವೆ ಎಂದು ಕೇಂದ್ರ ಮಾಜಿ ಸಚಿವ ಹಾಗೂ ಸಂಸದ ಎಂ. ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟರು....

ಚಿಕ್ಕಬಳ್ಳಾಪುರ: ದೇಶದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ದುಂದು ವೆಚ್ಚಗಳೂ ಕಾರಣವಾಗಿವೆ ಎಂದು ಕೇಂದ್ರ ಮಾಜಿ ಸಚಿವ ಹಾಗೂ ಸಂಸದ ಎಂ. ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟರು.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ದೇಶಾದ್ಯಂತ ರೈತರ ಆತ್ಮಹತ್ಯೆಗಳು ನಡೆಯುತ್ತಿದ್ದು, ಇದಕ್ಕೆ ಸಾಲ, ರೇಷ್ಮೆ ಆಮದು ಸುಂಕ ಕಡಿತ, ಬೆಳೆ ನಷ್ಟ, ಕೊಳವೆ ಬಾವಿ ವಿಫಲ ಪ್ರಮುಖ ಕಾರಣಗಳಾಗಿವೆ.
ಇವುಗಳ ಜತೆಗೆ ರೈತರು ಮಾಡುವ ದುಂದು ವೆಚ್ಚವೂ ಆತ್ಮಹತ್ಯೆಗೆ ಕಾರಣ ಎಂದು ಅಭಿಪ್ರಾಯಪಟ್ಟರು. ``ಸಂಸದೀಯ ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರೂ ಆಗಿರುವ ತಾವು ರೈತರ ಆತ್ಮಹತ್ಯೆ ಕುರಿತು ಅಧ್ಯಯನ ನಡೆಸಲು ನ. 2ರಿಂದ 5ರವರೆಗೂ ಮಹಾರಾಷ್ಟ್ರದ
ವಿದರ್ಭದಲ್ಲಿ ಪ್ರವಾಸ ಮಾಡುವೆ. ನಂತರ ರಾಜ್ಯದಲ್ಲಿ ಪ್ರವಾಸ ಮಾಡಿ ರೈತರ ಆತ್ಮಹತ್ಯೆ, ಬೆಳೆ ನಷ್ಟ, ಬೆಳೆ ವಿಮೆ ಸೇರಿದಂತೆ ಹಲವು ವಿಚಾರಗಳ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸುತ್ತೇನೆ'' ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


