ಸಚಿವ ಸಂಪುಟ ಕಸರತ್ತು ಸದ್ಯಕ್ಕಂತೂ ಇಲ್ಲ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಪ್ರಕ್ರಿಯೆ ನಡೆಯುವುದೇ ಅನುಮಾನವಾಗಿದೆ, ಸಂಪುಟ ಪುನಾರಚನೆ ಪ್ರಕ್ರಿಯೆ ಮತ್ತೆ ಹಿಂದೆ ಬೀಳುವ ಸಾಧ್ಯತೆ ದಟ್ಟವಾಗಿದೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಸ್ಥಾನವನ್ನು ಅಬಾಧಿತವಾಗಿಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಅಲ್ಲಿವರೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಪ್ರಕ್ರಿಯೆ ನಡೆಯುವುದೇ ಅನುಮಾನ. ಕಾಂಗ್ರೆಸ್‍ನ ಉನ್ನತ ಮೂಲಗಳಿಂದ ಈ ಮಾಹಿತಿ ಲಭ್ಯವಾಗಿದ್ದು, ಸಂಪುಟ ಪುನಾರಚನೆ ಪ್ರಕ್ರಿಯೆ ಮತ್ತೆ ಹಿಂದೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಹಾಲಿ ಅಧ್ಯಕ್ಷ ಪರಮೇಶ್ವರ ಅವರ ಭವಿಷ್ಯ ಏನು? ಎಂಬುದು ನಿರ್ಧಾರವಾಗದ ಹೊರತು ಸಂಪುಟ ವಿಸ್ತರಣೆ ಅಸಾಧ್ಯ ಎಂಬ ರಾಜಕೀಯ ಪರಿಸ್ಥಿತಿ ಸದ್ಯಕ್ಕೆ ನಿರ್ಮಾಣವಾಗಿರುವುದರಿಂದ ಆಕಾಂಕ್ಷಿಗಳು ಇನ್ನಷ್ಟು ದಿನ ಕಾಯಲೇಬೇಕು ಎನನಲಾಗುತ್ತಿದೆ. ಇದೇ ಅಕ್ಟೋಬರ್ 29ರಂದು ಪರಮೇಶ್ವರ ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷವಾಗಲಿದ್ದು. ಪ್ರದೇಶ ಕಾಂಗ್ರೆಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವ್ಯಕ್ತಿಯೊಬ್ಬರು ಅಧ್ಯಕ್ಷಗಿರಿಯನ್ನು ಐದು ವರ್ಷ ನಡೆಸಿದ್ದಾರೆ. ಈ ಹಿನ್ನೆಲೆ ಯಲ್ಲಿ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು ಸಾರ್ಥಕ ಸಮಾವೇಶವನ್ನು ಆಯೋಜಿಸಿದ್ದಾರೆ.
ಅರಮನೆ ಮೈದಾನದಲ್ಲಿ ನಡೆಯುವ ಈ ಸಮಾವೇಶವನ್ನು ಒಂದರ್ಥದಲ್ಲಿ ಪರಮೇಶ್ವರ ಅವರ ಬೀಳ್ಕೋಡುಗೆ ಸಮಾರಂಭ ಎಂದೇ ಪಕ್ಷದ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿತ್ತು. ಆದರೆ ಈಗ ಪರಿಸ್ಥಿತಿ ಮತ್ತೆ ಬದಲಾವಣೆಯತ್ತ ಸಾಗುತ್ತಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿವವರೆಗೂ ಅಂದರೆ ಫೆಬ್ರವರಿ ತಿಂಗಳವರೆಗೂ ಪರಮೇಶ್ವರ ಅವರೇ ಕೆಪಿಸಿಸಿ ಅಧ್ಯಕ್ಷರಾಗಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲೆಕ್ಕಾಚಾರ: ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕೆಂಬ ವಿಚಾರದಲ್ಲೂ ಭಾರಿ ಲೆಕ್ಕಾಚಾರ ನಡೆಯುತ್ತಿದೆ. ಈ ಸಂಬಂಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮೂಲ ಕಾಂಗ್ರೆಸಿಗರ ಮಧ್ಯೆ ಗೆರೆ ಎಳೆದಂತೆ ಭಿನ್ನಾಭಿಪ್ರಾಯ ಸೃಷ್ಟಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


