ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣ: ಮತ್ತೆ ನಾಲ್ವರ ಬಂಧನ
ಮೂಡುಬಿದಿರೆ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ನಾಲ್ವರು...

ಮಂಗಳೂರು: ಮೂಡುಬಿದಿರೆ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ನಾಲ್ವರು ಶಂಕಿತರನ್ನು ಬಂಧಿಸಿದ್ದಾರೆ. ಇದುವರೆಗೂ 8 ಆರೋಪಿಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.
ಪ್ರಕರಣದ ತನಿಖೆ ಚುರುಕುಗೊಳಿಸಿದ್ದು, ಪೂಜಾರಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳನ್ನು ಸದ್ಯದಲ್ಲೇ ಬಂಧಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಎಸ್.ಮುರಗನ್ ಅವರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಮೊಹಮ್ಮದ್ ಶರೀಫ್, ಮುಸ್ತಾಫ್ ಕಾವೂರ್, ಮೊಹಮ್ಮದ್ ಮುಸ್ತಾಫ್ ಮತ್ತು ಕಬೀರ್ ಎಂಬ ಶಂಕಿತ ಆರೋಪಿಗಳನ್ನು ಇಂದು ಬಂಧಿಸಲಾಗಿದೆ.
ಇದಕ್ಕೂ ಮುನ್ನ ಮೊಹಮ್ಮದ್ ಹನೀಫ್, ಮೊಹಮ್ಮದ್ ಇಲ್ಯಾಸ್, ಇಬ್ರಾಹಿಂ ಲಿಯಾಖತ್ ಮತ್ತು ಅಬ್ದುಲ್ ರಶೀದ್ ಎಂಬುವವರನ್ನು ಪೊಲೀಸರು ಬಂಧಿಸಿದ್ದರು.
ಗೋಕಳ್ಳರ ವಿರುದ್ಧದ ಕಾರ್ಯಾಚರಣೆ ಸಂದರ್ಭ ಮುಂಚೂಣಿಯಲ್ಲಿದ್ದ ಪ್ರಶಾಂತ್ ಪೂಜಾರಿ ಅವರನ್ನು ಅ.9ರಂದು ದುಷ್ಕರ್ಮಿಧಿಗಳ ಹತ್ಯೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


