ಅನ್ನಭಾಗ್ಯದ ಅಕ್ಕಿ ಚೀಲಗಳಲ್ಲಿ ಅಕ್ಕಿ ಬದಲು ಕಲ್ಲು!
ರಾಜ್ಯ ಸರ್ಕಾರ ಬಡವರಿಗಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವ ವಿಷಯ ಗೊತ್ತೇ ಇದೆ. ಸರ್ಕಾರದ ಹೆಚ್ಚಿನ...

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಬಡವರಿಗಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವ ವಿಷಯ ಗೊತ್ತೇ ಇದೆ. ಸರ್ಕಾರದ ಹೆಚ್ಚಿನ ಯೋಜನೆಗಳಲ್ಲಿಯೂ ಅನೇಕ ಸಂದರ್ಭಗಳಲ್ಲಿ ಅಕ್ರಮ ನಡೆಯುತ್ತದೆ. ಇಲ್ಲಿಯೂ ಆಗಿದ್ದು ಅದುವೇ. ಕೆಲವರು ಹಣಕ್ಕೋಸ್ಕರ ಏನು ಬೇಕಾದರೂ ಮಾಡಲು ಸಿದ್ಧ ಎಂಬುದಕ್ಕೆ ಇದುವೇ ಉದಾಹರಣೆ.
ಈ ಘಟನೆ ನಡೆದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ . ಸಾರ್ವಜನಿಕರೇ ಅವ್ಯವಹಾರವನ್ನು ಬಯಲಿಗೆಳೆದಿದ್ದಾರೆ.ಬೆಂಗಳೂರಿನಿಂದ ಬಂದ ಮೂರು ಲಾರಿಗಳಲ್ಲಿ ಅಕ್ಕಿ ಚೀಲಗಳಲ್ಲಿ ಸೈಜುಗಲ್ಲುಗಳನ್ನು ಹಾಕಿ ತೂಕ ಸರಿಬರುವಂತೆ ಮಾಡಲಾಗುತ್ತಿತ್ತು. ಹೀಗೆ ಮೂರು ಲಾರಿಗಳಲ್ಲಿ ಅಕ್ಕಿ ಚೀಲಗಳಲ್ಲಿ ಸುಮಾರು 1500 ಕೆಜಿ ಕಲ್ಲುಗಳು ಪತ್ತೆಯಾಗಿದೆ.
ಲಾರಿ ಚಾಲಕ ಮತ್ತು ಕ್ಲೀನರ್ ಸೇರಿಕೊಂಡು ಅನ್ನಭಾಗ್ಯದ ಅಕ್ಕಿ ಚೀಲದಲ್ಲಿ ಸೈಜುಗಲ್ಲುಗಳನ್ನು ತುಂಬಿಸುತ್ತಿದ್ದರು. ಹೀಗೆ ಒಂದು ದಿವಸ ಅಕ್ಕಿಚೀಲ ತೂಕ ಮಾಡುವಾಗ ಸಾರ್ವಜನಿಕರು ಗಮನಿಸಿದ್ದಾರೆ. ತಮ್ಮ ಅಕ್ರಮ ಬಯಲಿಗೆ ಬಂದಾಗ ಚಾಲಕರು, ಕ್ಲೀನರ್ ಗಳು ಲಾರಿಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಲಾರಿಗಳನ್ನು ಚಿಕ್ಕಬಳ್ಳಾಪುರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


