ಪ್ರಶಾಂತ್ ಕೊಲೆ ಪ್ರಕರಣ: ವಿದೇಶಕ್ಕೆ ಹಾರುತ್ತಿದ್ದ 9ನೇ ಆರೋಪಿ ಬಂಧನ
ವಿದೇಶಕ್ಕೆ ಪರಾರಿಯಾಗುವ ಯತ್ನದಲ್ಲಿದ್ದ ಮೂಡುಬಿದಿರೆ ಪ್ರಶಾಂತ್ ಕೊಲೆ ಪ್ರಕರಣದ 9ನೇ ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ವಿದೇಶಕ್ಕೆ ಪರಾರಿಯಾಗುವ ಯತ್ನದಲ್ಲಿದ್ದ ಮೂಡುಬಿದಿರೆ ಪ್ರಶಾಂತ್ ಕೊಲೆ ಪ್ರಕರಣದ 9ನೇ ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಹಮ್ಮದ್ ಇಮ್ತಿಯಾಜ್(40) ಎಂದು ಹೆಸರಿಸಲಾಗಿದ್ದು, ಈತ ದಂಟಕಲ್ ಹಲ್ಲೆ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿ ಈಗಾಗಲೇ 8 ಮಂದಿಯನ್ನು ಬಂಧಿಸಿದ್ದು, ಅವರು ನೀಡಿದ ಮಾಹಿತಿಯಂತೆ ಈತನನ್ನು ಬಂಧಿಸಲಾಗಿದೆ.
ಇದರೊಂದಿಗೆ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 9ಕ್ಕೆ ಏರಿದೆ. ತಲೆಮರೆಸಿಕೊಂಡಿದ್ದ ಈತ ಶುಕ್ರವಾರ ದುಬೈಗೆ ಪರಾರಿಯಾಗಲು ಮುಂಬೈನ ನಾಗಪುರ ವಿಮಾನ ನಿಲ್ದಾಣದಲ್ಲಿ ವಲಸೆ ವಿಭಾಗದಲ್ಲಿದ್ದ. ಆತನ ಪಾಸ್‍ಪೊರ್ಟ್ ಪರಿಶೀಲನೆ ವೇಳೆ ಮೂಡುಬಿದಿರೆ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವುದು ಬೆಳಕಿಗೆ ಬಂದಿತ್ತು. ಕೂಡಲೇ ವಲಸೆ ವಿಭಾಗದ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡು ಮಂಗಳೂರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಎಡಿಜಿಪಿ ಅಲೋಕ್ ಮೋಹನ್, ಇಮ್ತಿಯಾಜ್ ಹೊರತುಪಡಿಸಿ ಉಳಿದ 8 ಮಂದಿ ಪಿಎಎಫ್ ಐ ಸಂಘಟನೆ ಜತೆ ಸಂಪರ್ಕವಿರುವುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಈತನ ಮೇಲೆ ಪ್ರಶಾಂತ್ ಹತ್ಯೆಗೆ ಯೋಜನೆ ರೂಪಿಸಿದ ಆರೋಪವಿದೆ ಇನ್ನೂ ಎಷ್ಟು ಮಂದಿ ಕೊಲೆ ಕೃತ್ಯದಲ್ಲಿ ಕೈಜೋಡಿಸಿದ್ದಾರೆ ಎಂಬುದು ಪೂರ್ತಿ ತನಿಖೆ ನಂತರ ಎಲ್ಲವೂ ಗೊತ್ತಾಗಲಿದೆ ಎಂದರು. ಮೂಡುಬಿದಿರೆ ಘಟನೆಯಲ್ಲಿ ಬೆದರಿಕೆ ಕರೆ ಬಂದ ಬಗ್ಗೆ ಸೈಬರ್ ಕ್ರೈಂನಡಿ ತನಿಖೆ ನಡೆಸಲಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೊಸ್ಟ್ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಈ ಘಟನೆಯಲ್ಲಿ ಪೊಲೀಸರು ಪಕ್ಷಪಾತ ಎಸಗಿಲ್ಲ, ಈ ಕುರಿತ ಆರೋಪಗಳಲ್ಲಿ ಹುರುಳಿಲ್ಲ ಎಂದರು. ಪಶ್ಚಿಮ ವಲಯ ಐಜಿಪಿ ಅಮೃತ್ ಪಾಲ್, ನಗರ ಪೊಲೀಸ್ ಕಮಿಷನರ್ ಮುರುಗನ್, ಜಿಲ್ಲಾ ಎಸ್ಪಿ ಡಾ.ಶರಣಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


