ಸಾಧಕರಿಗೆ ದಸರಾ ಸನ್ಮಾನ
ನಗರದ ಎಚ್‍ಎಸ್‍ಆರ್ ಲೇಔಟ್‍ನ `ಜೈ ಮಾತಾ ದೀ' ಸಂಘದ ವತಿಯಿಂದ 8ನೇ ವರ್ಷದ ದಸರಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶನಿವಾರ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು...

ಬೆಂಗಳೂರು: ನಗರದ ಎಚ್‍ಎಸ್‍ಆರ್ ಲೇಔಟ್‍ನ `ಜೈ ಮಾತಾ ದೀ' ಸಂಘದ ವತಿಯಿಂದ 8ನೇ ವರ್ಷದ ದಸರಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶನಿವಾರ ನಡೆದ ಕಾರ್ಯಕ್ರಮದಲ್ಲಿ
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.
ಇದೇ ವೇಳೆ ಯಕ್ಷಗಾನ, ಸಂಗೀತ ಸೇರಿದಂತೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇದೇ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ತುಮಕೂರಿನ ಅಟವಿ ಮಠದ ಶಿವಲಿಂಗ ಮಹಾ ಸ್ವಾಮೀಜಿ ಅವರಿಗೆ `ಶಾಂತಿ ಮತ್ತು ಸಹಬಾಳ್ವೇ ಪ್ರಶಸ್ತಿ, ಗೋಸಾಯಿ ಮಠದ ಸ್ವಾಮಿ ಬುದ್ಧಿ ಯೋಗಾನಂದ ಸ್ವಾಮೀಜಿ ಗೆ `ಜೀವಮಾನ ಸಾಧನೆ ಪ್ರಶಸ್ತಿ', ಎಚ್. ಆರ್.ಸೋಮಶೇಖರ ರೆಡ್ಡಿ ಹಾಗೂ ಎಚ್. ಆರ್.ಶಾಮಲಾ ಅವರಿಗೆ `ಎಚ್‍ಎಸ್‍ಆರ್ ಲೇಔಟ್‍ನ ಆದರ್ಶ ದಂಪತಿ 2015-ದಸರಾ ಪ್ರಶಸ್ತಿ', ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರಿಗೆ `ಭೈರವ ರತ್ನ ಪ್ರಶಸ್ತಿ', ಸಮಾಜ ಸೇವಕ ಡಾ.ನಾಗೇಂದ್ರ ಪ್ರಸಾದ್ ಅವರಿಗೆ `ದಸರ ಶ್ರೀ ಪ್ರಶಸ್ತಿ' ಹಾಗೂ ಎಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಯ ಪೇದೆ ರಘು ಬೆಟ್ಟಳ್ಳಿ ಅವರಿಗೆ `ಉದಯೋನ್ಮುಖ ಪ್ರತಿಭೆ ಪ್ರಶಸ್ತಿ', ಪಂಚಮಿ ಎಂಬ ಯುವತಿಗೆ `ದಸರಾ ಸುಂದರಶ್ರೀ ಪ್ರಶಸ್ತಿ'ಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮಕ್ಕೆ ಗಣ್ಯರನ್ನು ಮೆರವಣಿಗೆ ಮೂಲಕ ಕರೆತರಲಾಯಿತು. ಕಾರ್ಯಕ್ರಮ ದಲ್ಲಿ ಎಚ್‍ಎಸ್‍ಆರ್ ಲೇಔಟ್‍ನ ನೂರಾರು ನಾಗರಿಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


