ಜಾತೀಯತೆಯಿಂದ ಸಮಾಜದ ಸ್ವಾಸ್ಥ್ಯ ನಾಶ: ಉಮಾಶ್ರೀ
ಸಂದಿಗ್ಧ ಸಮಾಜದಲ್ಲಿರುವ ನಾವು ಜಾತಿ ಜಾತಿಗಳ ಹೆಸರಿನಲ್ಲಿ ಮನುಷ್ಯರ ನಡುವೆ ಅಂತರ ಕಾಯ್ದುಕೊಂಡು ಅನಾರೋಗ್ಯಕರ ವಾತಾವರಣಕ್ಕೆ ನಾಂದಿ ಹಾಡುತ್ತಿದ್ದೇವೆ...

ಬೆಂಗಳೂರು: ಸಂದಿಗ್ಧ ಸಮಾಜದಲ್ಲಿರುವ ನಾವು ಜಾತಿ ಜಾತಿಗಳ ಹೆಸರಿನಲ್ಲಿ ಮನುಷ್ಯರ ನಡುವೆ ಅಂತರ ಕಾಯ್ದುಕೊಂಡು ಅನಾರೋಗ್ಯಕರ ವಾತಾವರಣಕ್ಕೆ ನಾಂದಿ ಹಾಡುತ್ತಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ವಿಷದಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಿಬಿಎಂಪಿ ಹಾಗೂ ‘ವೀರಮಾತೆ ಕಿತ್ತೂರು ರಾಣಿ ಚನ್ನಮ್ಮ ಪ್ರತಿಷ್ಠಾನ’ದ ಆಶ್ರಯದಲ್ಲಿ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಕಿತ್ತೂರು ರಾಣಿ ಚನ್ನಮ್ಮನ 191ನೇ ವರ್ಷದ ವಿಜಯೋತ್ಸವ ಆಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬ್ರಿಟಿಷರ ದಬ್ಬಾಳಿಕೆಗೆ ತಕ್ಕ ಶಾಸ್ತಿ ಮಾಡಿದ್ದ ಚನ್ನಮ್ಮ ಮಹಿಳೆಯರಿಗೆ ಎಂದೆಂದಿಗೂ ಸ್ಫೂರ್ತಿಯಾಗಿ ನಿಲ್ಲುತ್ತಾರೆ. ಜೀವನದಲ್ಲಿ ಕಷ್ಟಗಳು ಬಂದಾಗ, ಬೇರೊಬ್ಬರು ದಬ್ಬಾಳಿಕೆ ನಡೆಸಿದಾಗ ಮಹಿಳೆಯರು ಚನ್ನಮ್ಮನ ಅವತಾರ ಎತ್ತಬೇಕು’ ಎಂದು ಸಲಹೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮ ಹಾಗೂ ಅಕ್ಕಮಹಾದೇವಿ ಅವರ ಸಾಧನೆಗಳ ಬಗ್ಗೆ ಇಡೀ ದಿನದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದರು.
ಇತ್ತೀಚಿನ ದಿನಗಳಲ್ಲಿ ಸಂಭ್ರಮ, ಉತ್ಸವಗಳಲ್ಲಿ ಕಲಾ ಮೆರವಣಿಗೆಗಳಲ್ಲಿ ಶಾಲಾ ಮಕ್ಕಳನ್ನು ಬಳಸಿಕೊಳ್ಳುವುದು ಹೆಚ್ಚುತ್ತಿದೆ. ಇದು ತಪ್ಪು. 14 ವರ್ಷ ದಾಟಿದ ಆಸಕ್ತ ಮಕ್ಕಳಿಗೆ ಜನಪದ ಕಲೆಗಳ ಬಗ್ಗೆ ತರಬೇತಿ ನೀಡಿ ವಿಶೇಷ ಸಂದರ್ಭಗಳಲ್ಲಿ ಅವರ ಪ್ರತಿಭೆ ಬಳಸಿಕೊಳ್ಳಬೇಕು’ ಎಂದರು.
ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಮಾತನಾಡಿ, ‘ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಯಾವುದೇ ಬೆಂಬಲ ಇರಲಿಲ್ಲ. ಅಂತಹ ಕಾಲದಲ್ಲಿ ಕಿತ್ತೂರು ಚನ್ನಮ್ಮ ಅವರು ಪರಕೀಯರನ್ನು ನಡುಗಿಸುವಷ್ಟು ಸಾಮರ್ಥ್ಯ ಪ್ರದರ್ಶಿಸಿದರು. ಇಂದು ಮಹಿಳೆಯರಿಗೆ ಸಾಕಷ್ಟು ಪ್ರೊತ್ಸಾಹ ಸಿಗುತ್ತಿದೆ’ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


