ಸಾಹಿತಿ ಆರೂರು ಲಕ್ಷ್ಮಣ ಶೇಟ್ ನಿಧನ
ಹಿರಿಯ ಸಾಹಿತಿ, ಅಂಕಣಕಾರ, ಅಕ್ಷರ ಸಾಹಿತ್ಯ ವೇದಿಕೆ ಅಧ್ಯಕ್ಷ ಆರೂರು ಲಕ್ಷ್ಮಣ ಶೇಟ್ (66) ಶನಿವಾರ ನಿಧನರಾಗಿದ್ದಾರೆ. .....

ಹುಬ್ಬಳ್ಳಿ : ಹಿರಿಯ ಸಾಹಿತಿ, ಅಂಕಣಕಾರ, ಅಕ್ಷರ ಸಾಹಿತ್ಯ ವೇದಿಕೆ ಅಧ್ಯಕ್ಷ ಆರೂರು ಲಕ್ಷ್ಮಣ ಶೇಟ್ (66) ಶನಿವಾರ ನಿಧನರಾಗಿದ್ದಾರೆ.
ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ಸಾಹಿತ್ಯ-ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರಿಗೆ ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವಿದೆ. ಮೂಲತಃ ಉಡುಪಿ ಜಿಲ್ಲೆಯ ಆರೂರು ಮೂಲದ ಲಕ್ಷ್ಮಣ ಶೇಟ್ ಕಳೆದ ಮೂರು ದಶಕಗಳಿಂದ ಹುಬ್ಬಳ್ಳಿಯಲ್ಲಿ ನೆಲೆಸಿದ್ದರು.
ಕತೆಗಾರ, ಕಾದಂಬರಿಕಾರ, ಕವಿಯಾಗಿ ಹಲವಾರು ಸಾಹಿತ್ಯ ಕೃತಿಗಳನ್ನು ರಚಿಸಿದ್ದ ಅವರು ಹಲವಾರು ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆದಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಕತೆಗಳನ್ನು ಬರೆಯುತ್ತಿದ್ದ ಅವರು, ಸುಮಾರು 400 ಕತೆಗಳನ್ನು ಬರೆದಿದ್ದಾರೆ. ಅವರ ಎರಡು ಕಥಾ ಸಂಕಲನಗಳಲ್ಲಿ "ವೇಷಗಳು' ಪ್ರಮುಖವಾದುದು.
ಬಿಎಯಲ್ಲಿ ರ್‍ಯಾಂಕ್ ಪಡೆದ ಲಕ್ಷ್ಮಣ ಶೇಟ್, ಅದೇ ದಿನ ಶಿಕ್ಷಕರಾಗಿದ್ದ ತಮ್ಮ ತಂದೆಯನ್ನು ಕಳೆದುಕೊಂಡಿದ್ದರು. ಸಾಹಿತ್ಯಿಕ ವಲಯದಲ್ಲಿ ಸದಾ ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


