ಸೇನೆಯಲ್ಲಿ ಮುಧೋಳ ನಾಯಿ
ನಮ್ಮ ರಾಜ್ಯದ ಮುಧೋಳ ನಾಯಿಗಳನ್ನು ಇನ್ನು ಸ್ವಲ್ಪ ಸಮಯದಲ್ಲಿ ಭಾರತೀಯ ಸೇನೆಯಲ್ಲಿ ಕಾಣಬಹುದು. ಉದ್ದನೆಯ...

ಬಾಗಲಕೋಟೆ: ನಮ್ಮ ರಾಜ್ಯದ ಮುಧೋಳ ನಾಯಿಗಳನ್ನು ಇನ್ನು ಸ್ವಲ್ಪ ಸಮಯದಲ್ಲಿ ಭಾರತೀಯ ಸೇನೆಯಲ್ಲಿ ಕಾಣಬಹುದು. ಉದ್ದನೆಯ ಸಪೂರದ ದೇಹ ಹೊಂದಿರುವ ಮುಧೋಳ ನಾಯಿಗಳು ತುಂಬಾ ಚುರುಕು. ಈ ನಾಯಿ ಭಾರತೀಯ ಸೇನೆಗೆ ಸೇರಿ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಲಿದೆ.
ಭಾರತೀಯ ಸೇನಾ ಕಾರ್ಯಾಚರಣೆಯಲ್ಲಿ ಮುಧೋಳ ನಾಯಿಗಳನ್ನು ಸೇರ್ಪಡೆಗೊಳಿಸಿ ಅವುಗಳ ಉಪಯೋಗವನ್ನು ಪಡೆದುಕೊಳ್ಳಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ಪಶುಸಂಗೋಪನಾ ಇಲಾಖೆಯ ಆಯುಕ್ತ ಡಾ.ಸುರೇಶ ಎಸ್.ಹೊನ್ನಪ್ಪಗೋಳ ತಿಳಿಸಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ಮುಧೋಳ ನಾಯಿಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಮುಧೋಳ ನಾಯಿಗಳನ್ನು ಮಿಲಿಟರಿಯಲ್ಲಿ ಬಳಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮುಧೋಳದಲ್ಲಿರುವ ಶ್ವಾನ ತಳಿ ಅಭಿವೃದ್ಧಿ ಕೇಂದ್ರ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ಬಾಗಲಕೋಟೆಯಲ್ಲಿ ರಾಷ್ಟ್ರೀಯ ಶ್ವಾನ ಸಂಶೋಧನಾ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೊನ್ನಪ್ಪಗೋಳ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


