ಸಾಲಬಾಧೆಗೆ ಮತ್ತಿಬ್ಬರು ರೈತರು ಬಲಿ
ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರೆದಿದ್ದು, ಮಂಗಳವಾರವೂ ಕೂಡ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ...

ಕೊಪ್ಪಳ: ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರೆದಿದ್ದು, ಮಂಗಳವಾರವೂ ಕೂಡ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದ ಕೊಪ್ಪಳ ಮತ್ತು ಗುಬ್ಬಿ ತಾಲ್ಲೂಕಿನಲ್ಲಿ ಇಬ್ಬರು ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಗುಬ್ಬಿ ತಾಲ್ಲೂಕಿನ ಅಳೀಲುಗಟ್ಟಿ ಮಧಿರೆಯ ಪತಿಯೆಪ್ಪನಪಾಳ್ಯ ಗ್ರಾಮದ ಕೆಂಪರಂಗಯ್ಯ(51) ಇಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಆತ ಮಾಡಿಕೊಂಡಿದ್ದ 5.50 ಲಕ್ಷ ರು. ಸಾಲವೇ ಕಾರಣ ಎಂದು ಹೇಳಲಾಗುತ್ತಿದೆ.
ಮೃತ ರೈತ ಕೆಂಪರಂಗಯ್ಯ ತನ್ನ ಎರಡು ಎಕರೆ ಜಮೀನಿನಲ್ಲಿ ಕೃಷಿಗೋಸ್ಕರ ಕೊಳವೆ ಬಾವಿಯನ್ನು ಕೊರೆಸಿದ್ದನು. ಸಕಾಲಕ್ಕೆ ಮಳೆ ಬಾರದ ಹಿನ್ನೆಲೆಯಲ್ಲಿ ಕೊಳವೆ ಬಾವಿ ಬತ್ತಿ ಹೋಗಿತ್ತು. 4 ಲಕ್ಷ ರು.ಗಳಷ್ಟು ಕೈ ಸಾಲ ಮತ್ತು ಸ್ಥಳೀಯ ಕೆಜಿಬಿ ಬ್ಯಾಂಕ್‌ನಿಂದ 1.50 ಲಕ್ಷ ರು.ಗಳಷ್ಟು ಸಾಲ ಮಾಡಿದ್ದನು. ಈ ಕಾರಣದಿಂದ ಸಾಲ ತೀರಿಸಲಾಗದೆ ಮನನೊಂದು ನಿನ್ನೆ ರಾತ್ರಿ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಚೇಳೂರು ಠಾಣೆ ಪಿಎಸ್‌ಐ ಎಫ್.ಕೆ.ನದಾಫ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇನ್ನು ಇಂತಹುದೇ ಮತ್ತೊಂದು ಸುದ್ದಿಯೊಂದು ಕೊಪ್ಪಳದಲ್ಲಿ ವರದಿಯಾಗಿದ್ದು, ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಜಿಲ್ಲೆಯ ಹಲಗೇರಿ ಗ್ರಾಮದ ರವಿ(30) ಮೃತ ರೈತನಾಗಿದ್ದು, ರವಿ ತನ್ನ 10 ಎಕರೆ ಜಮೀನಿನಲ್ಲಿ ಮೆಕ್ಕೆ ಜೋಳ, ಸೂರ್ಯಕಾಂತಿ ಬೆಳೆಯನ್ನು ಬೆಳದಿದ್ದ. ಇದಕ್ಕಾಗಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕೈ ಸಾಲ ಮಾಡಿಕೊಂಡಿದ್ದ ಎಂದು ಹೇಳಲಾಗುತ್ತಿದೆ. ಮಳೆ ಬಾರದೆ ಬೆಳೆ ಕೈ ಕೊಟ್ಟ ಪರಿಣಾಮ ಸಾಲ ತೀರಿಸಲಾಗದೆ ರವಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


