ಕಪಿಲ್ ಮೋಹನ್ ಸ್ನೇಹಿತನ ಬಂಧನ
ಹಿರಿಯ ಐಎಎಸ್ ಅಧಿಕಾರಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಅವರಿಗೆ ಸೇರಿದ ಯಶವಂತಪುರದ ಅಪಾರ್ಟ್‍ಮೆಂಟನಲ್ಲಿ ಸಿಕ್ಕಿದ್ದ 4.37 ಕೋಟಿ ಹಣ ತಮಗೆ ಸೇರಿದ್ದೆಂದು ಉದ್ಯಮಿ ಜಯಶಿವ ಸಕ್ಸೇನಾ ಎಂಬುವರು...

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಅವರಿಗೆ ಸೇರಿದ ಯಶವಂತಪುರದ ಅಪಾರ್ಟ್‍ಮೆಂಟನಲ್ಲಿ ಸಿಕ್ಕಿದ್ದ 4.37 ಕೋಟಿ ಹಣ ತಮಗೆ ಸೇರಿದ್ದೆಂದು ಉದ್ಯಮಿ ಜಯಶಿವ ಸಕ್ಸೇನಾ ಎಂಬುವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಜಯಶಿವ ಸಕ್ಸೇನಾ ಅವರನ್ನು ಸೋಮವಾರ ಬಂಧಿಸಿದ್ದಾರೆ. ಇದರೊಂದಿಗೆ ಕಪಿಲ ಮೋಹನ್ ಹಾಗೂ ಉದ್ಯಮಿ ಜಯಶಿವ ಸಕ್ಸೇನಾ ನಡುವೆ ನಂಟು ಇರುವುದು ತನಿಖೆಯಲ್ಲಿ ಬಹಿರಂಗಗೊಂಡಿದೆ. ಹುಬ್ಬಳ್ಳಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಬಗ್ಗೆ ತನಿಖೆ ನಡೆಸುತ್ತಿದ್ದ ಸಿಐಡಿ ಅಧಿಕಾರಿಗಳು ಅಗಸ್ಟ್ ತಿಂಗಳ ಎರಡನೇ ವಾರದಲ್ಲಿ
ಯಶವಂತಪುರದಲ್ಲಿರುವ ಕಪಿಲ್ ಮೋಹನ ಅಪಾರ್ಟ್‍ಮೆಂಟ್ ಮೇಲೆ ದಾಳಿ ನಡೆಸಿದ್ದಾರೆ
ಈ ವೇಳೆ 4.37ಕೋಟಿ ಹಣದ ಜೊತೆಗೆ ಅಪಾರ ಚಿನ್ನಾಭರಣ, ವಜ್ರ ಹಾಗೂ ವಿವಿಧ ಆಸ್ತಿ ದಾಖಲೆ ಪತ್ರಗಳು ಸಿಕ್ಕಿದ್ದವು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ಆದಾಯ ತೆರಿಗೆ ಇಲಾಖೆಗೆ ವಹಿಸಿದ್ದರು. ಅಲ್ಲದೇ ಅಕ್ರಮ ಆಸ್ತಿ ಆರೋಪ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಕೂಡ ತನಿಖೆ ಕೈಗೊಂಡಿದ್ದರು. ಅಪಾರ ಹಣ ಎಲ್ಲಿಂದ ಬಂತು ಎಂದು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿರುವ ನಡುವೆ ಉದ್ಯಮಿ ಜಯಶಿವ ಸಕ್ಸೇನಾ ಪ್ರವೇಶವಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


