ಕುಖ್ಯಾತ ರೌಡಿ ಸೆಕ್ಸಿಗುಂಡನ ಬಂಧನ
ದರೋಡೆಗೆ ಹೊಂಚು ಹಾಕಿ ಕುಳಿತಿದ್ದ ಕುಖ್ಯಾತ ರೌಡಿ ಚಂದ್ರಶೇಖರ್ ಅಲಿಯಾಸ್ ಸೆಕ್ಸಿ ಗುಂಡನನ್ನು ಸಿಸಿಬಿ ಪೊಲೀಸರು...

Published On :
ಬೆಂಗಳೂರು: ದರೋಡೆಗೆ ಹೊಂಚು ಹಾಕಿ ಕುಳಿತಿದ್ದ ಕುಖ್ಯಾತ ರೌಡಿ ಚಂದ್ರಶೇಖರ್ ಅಲಿಯಾಸ್ ಸೆಕ್ಸಿ ಗುಂಡನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರಣ್ಯಪುರ ಬಸ್ ನಿಲ್ದಾಣದ ಸಮೀಪದ ನಿರ್ಜನ ಪ್ರದೇಶದಲ್ಲಿ ಸೆಕ್ಸಿ ಗುಂಡ(42) ಮತ್ತು ಆತನ ಇಬ್ಬರು ಸಹಚರರು ದರೋಡೆಗೆ ಹೊಂಚು ಹಾಕಿ ಕುಳಿತಿದ್ದರು. ಈ ವೇಳೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಹಚರರಾದ ಮೋಹನ್ ಕುಮಾರ್(28) ಹಾಗೂ ಜೋಸೆಫ್(29) ಬಂಧಿತ ಆರೋಪಿಗಳು. ಆರೋಪಿಗಳಿಂದ ಟಾಟಾ ಇಂಡಿಕಾ ಕಾರು, ಪಲ್ಸರ್ ಬೈಕ್, ಲಾಂಗು, ಮಚ್ಚುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸೆಕ್ಸಿಗುಂಡ 1 ಕೊಲೆ ಪ್ರಕರಣ, ಕೊಲೆ ಯತ್ನ, ದರೋಡೆ ಸೇರಿ ಒಟ್ಟು 10 ಪ್ರಕರಣ ಆರೋಪಿಯಾಗಿದ್ದಾನೆ. ಈತನ ಮೇಲೆ ವಿದ್ಯಾರಣ್ಯಪುರ, ಜಾಲಹಳ್ಳಿ, ಹೆಬ್ಬಾಳ, ಸಂಜಯನಗರ, ಕೊಡಿಗೆಹಳ್ಳಿ, ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


