ಜಿಲ್ಲಾ ಸುದ್ದಿ

ವೇಗವಾಗಿ ಬಂದ ಕಾರಿಗೆ ಇಬ್ಬರು ಬಲಿ

ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಮ್ಮಹಳ್ಳಿಯ ಮುಖ್ಯರಸ್ತೆಯಲ್ಲಿ...

ವೇಗವಾಗಿ ಬಂದ ಕಾರಿಗೆ ಇಬ್ಬರು ಬಲಿ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಮ್ಮಹಳ್ಳಿಯ ಮುಖ್ಯರಸ್ತೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಚಿಕ್ಕಯ್ಯಪ್ಪ (48) ಹಾಗೂ ಮಾಲಾ (40) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯರಾತ್ರಿ ಕಂಠಪೂರ್ತಿ ಕುಡಿದಿದ್ದ ವಿಪ್ರೋ ಕಂಪನಿಯ ಮ್ಯಾನೇಜರ್ ಬಲ್ಜಿತ್ ಸಿಂಗ್ ಅವರು ಈ ಇಬ್ಬರಿಗೆ ಡಿಕ್ಕಿ ಹೊಡಿದಿದ್ದಾರೆ. ಕಾರು ಹರಿದ ರಭಸಕ್ಕೆ ಮಾಲಾ ಸ್ಥಳದಲ್ಲೇ ಮೃತಪಟ್ಟಿದ್ದು, ಚಿಕ್ಕಯ್ಯಪ್ಪ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. 
ಇವರಿಬ್ಬರೂ ಚರ್ಚನಲ್ಲಿ ಅಸೆಂಬ್ಲಿ ಇದ್ದರಿಂದ ರಾತ್ರಿ 12.40ರವರೆಗೆ ಅಲ್ಲಿಯೇ ಇದ್ದು ಮನೆಗೆ ವಾಪಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಮಡಿವಾಳ ಪೊಲೀಸರು ಬಲ್ಜಿತ್ ಸಿಂಗ್ ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.