ರಾಜ್ಯೋತ್ಸವ ಧ್ವಜಾರೋಹಣಕ್ಕೆ ಅಡ್ಡಿಪಡಿಸಿದ ಐಐಟಿ ಹೋರಾಟಗಾರರು
ಐಐಟಿ ಕೈ ತಪ್ಪಿರುವ ಹಿನ್ನಲೆಯಲ್ಲಿ ತೀರ್ವ ಆಕ್ರೋಶ ವ್ಯಕ್ತಪಡಿಸಿರುವ ರಾಯಚೂರು ಹೋರಾಟಗಾರರು...

Published On :
ರಾಯಚೂರು: ಐಐಟಿ ಕೈ ತಪ್ಪಿರುವ ಹಿನ್ನಲೆಯಲ್ಲಿ ತೀರ್ವ ಆಕ್ರೋಶ ವ್ಯಕ್ತಪಡಿಸಿರುವ ರಾಯಚೂರು ಹೋರಾಟಗಾರರು ಕನ್ನಡ ರಾಜ್ಯೋತ್ಸವ ಧ್ವಜಾರೋಹಣಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಇಂದು ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ ಅವರು ಧ್ಜಜಾರೋಹಣ ಮಾಡಲು ಕ್ರೀಡಾಂಗಣಕ್ಕೆ ಆಗಮಿಸುತ್ತಿದ್ದಂತೆಯೇ ಹೋರಾಟಗಾರರು ಸಚಿವರ ಕಾರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಹೋರಾಟಗಾರರನ್ನು ತಡೆದ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಿ ಧ್ವಜಾರೋಹಣಕ್ಕೆ ಅವಕಾಶ ಮಾಡಿಕೊಟ್ಟರು. ಐಐಟಿ ಕೈ ತಪ್ಪಿದ ಹಿನ್ನಲೆಯಲ್ಲಿ ನಮ್ಮ ಜಿಲ್ಲೆಗೆ ಅನ್ಯಾಯಾವಾಗಿದೆ, ಈ ಅನ್ಯಾಯವನ್ನು ಸರಿಪಡಿಸದಿದ್ದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


