`ತಂತ್ರಜ್ಞಾನವಿಲ್ಲದೇ ಬದುಕೇ ಇಲ್ಲ ': ಸಚಿವೆ ಉಮಾಶ್ರೀ
ಬದಲಾಗುತ್ತಿರುವ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನವಿಲ್ಲದೇ ಬದುಕೇ ಇಲ್ಲ ಎಂಬ ಹಂತಕ್ಕೆ ತಲುಪಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅಭಿಪ್ರಾಯಪಟ್ಟರು...

ಬೆಂಗಳೂರು: ಬದಲಾಗುತ್ತಿರುವ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನವಿಲ್ಲದೇ ಬದುಕೇ ಇಲ್ಲ ಎಂಬ ಹಂತಕ್ಕೆ ತಲುಪಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅಭಿಪ್ರಾಯಪಟ್ಟರು.
ಕನ್ನಡ ಗಣಕ ಉಚಿತ ತರಬೇತಿ ಕೇಂದ್ರ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ತರಬೇತಿ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಂಪ್ಯೂಟರ್ ಕೌಶಲ್ಯದಿಂದ ಉದ್ಯೋಗ ಪಡೆಯುವ ಕಾಲಘಟ್ಟದಲ್ಲಿವೆ. ಹಾಗಾಗಿ ಎಲ್ಲರೂ ಕಂಪ್ಯೂಟರ್ ಜ್ಞಾನವುಳ್ಳವರಾಗಬೇಕಿದೆ ಎಂದು ತಿಳಿಸಿದರು.ತಂತ್ರಜ್ಞಾನ ಎಷ್ಟರ ಮಟ್ಟಿಗೆ ವ್ಯಾಪಿಸಿದೆ ಎಂದರೆ, ತಂತ್ರಜ್ಞಾನವಿಲ್ಲದೆ ಜೀವನವನ್ನೇ ಊಹಿಸಿಕೊಳ್ಳುವುದು ಸಾಧ್ಯವಿಲ್ಲ.
ಎಲ್ಲ ಕ್ಷೇತ್ರಗಳಲ್ಲೂ ಇದು ಬಹಳಷ್ಟು ಪ್ರಭಾವ ಬೀರಿದೆ. ಕೂತಲ್ಲೇ ಜಗತ್ ನೋಡುವ ಮೊಬೈಲ್‍ನಲ್ಲಿ ದೇಶದ ಎಲ್ಲ ಭಾಷೆಗಳನ್ನು ಅಳವಡಿಸಿದೆ. ಸಾಕಷ್ಟು ಉದ್ಯೋಗ ಸೃಷ್ಟಿಸುತ್ತಿರುವ ತಂತ್ರಜ್ಞಾನ, ಆಧುನಿಕ ಜೀವನಕ್ಕೆ ಅತೀ ಮುಖ್ಯ. ಜೊತೆಗೆ ಬೇರೆ ಬೇರೆ ಭಾಷೆಗಳಿಂದ ವಿಚಾರ ವಿನಿಮಯ ಮಾಡಿಕೊಳ್ಳಲು ನೆರವಾಗಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


