ತಾಯಿಗೆ ಕಾಯಿಲೆ: ನೊಂದ ನಿರ್ದೇಶಕ ಆತ್ಮಹತ್ಯೆ
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯ ಕಷ್ಟ ನೋಡಲಾಗದೆ ನೊಂದ ಮಗ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಂಜಯ್ ನಗರ ಕೆಇಬಿ ಬಡಾವಣೆಯಲ್ಲಿ ನಡೆದಿದೆ...

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯ ಕಷ್ಟ ನೋಡಲಾಗದೆ ನೊಂದ ಮಗ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಂಜಯ್ ನಗರ ಕೆಇಬಿ ಬಡಾವಣೆಯಲ್ಲಿ ನಡೆದಿದೆ.
ನಿರ್ದೇಶಕ, ಟಿವಿ ವಾಹಿನಿಗಳಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿ ಕೊಡುತ್ತಿದ್ದ ಹೋಮಿಯೋಪಥಿ ವೈದ್ಯ ಉಮಾಶಂಕರ್ (61)ಆತ್ಮಹತ್ಯೆ ಮಾಡಿಕೊಂಡವರು. ಹೆತ್ತವಳ ಕೂಗು, ಸಿಬಿಐ ವಿಜಯ್ ಚಿತ್ರಗಳನ್ನು ನಿರ್ದೇಶಿರುವ ಉಮಾಶಂಕರ್ ಚಿತ್ರರಂಗದಿಂದ ದೂರ ಸರಿದಿದ್ದರು.
ಜ್ಯೋತಿಷ್ಯ ಹೇಳುವುದರ ಜತೆಗೆ ಹೋಮಿಯೋಪತಿ ವೈದ್ಯರಾಗಿ ಮನೆಯಲ್ಲೆ ಚಿಕಿತ್ಸೆ ನೀಡುತ್ತಿದ್ದರು. ಸುಮಾರು 80 ವರ್ಷದ ತಾಯಿ ಪಾಶ್ರ್ವವಾಯು ಪೀಡಿತರಾಗಿದ್ದು ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಬದುಕುಳಿಯುವುದು ಕಷ್ಟ ಎಂದು ವೈದ್ಯರು ತಿಳಿಸಿದ್ದರು ಎನ್ನಲಾಗಿದೆ. ನೊಂದ ಉಮಾಶಂಕರ್ ಮಂಗಳವಾರ ನಸುಕಿನ 4.30ರ ಸುಮಾರು ನೇಣಿಗೆ ಶರಣಾಗಿದ್ದಾರೆ. ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೀಟಿ ವಂಚನೆ ಆರೋಪಿ ಬಂಧನ: ಚೀಟಿ ವ್ಯವಹಾರ ನಡೆಸಿ ಸಾರ್ವಜನಿಕರಿಂದ ಕೋಟ್ಯಂತರ ಸಂಗ್ರಹಿಸಿ ತಲೆಮರೆಸಿ- ಕೊಂಡಿದ್ದ ಆರೋಪಿ ಕುಮಾರ್ ಎಂಬಾತನನ್ನು ಜ್ಞಾನಭಾರತಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮಲ್ಲತ್ತಹಳ್ಳಿ ಸಮೀಪದ ಐಟಿಐ ಲೇಔಟ್‍ನಲ್ಲಿ 70ಕ್ಕೂ ಹೆಚ್ಚು ಮಹಿಳೆಯರಿಂದ ಚೀಟಿ ವ್ಯವಹಾರದ ಹೆಸರಿನಲ್ಲಿ ಕೋಟ್ಯಂತರ ರುಪಾಯಿ ಹಣ ಸಂಗ್ರಹಿಸಿ ತಲೆಮರೆಸಿಕೊಂಡಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


