ಜಿಲ್ಲಾ ಸುದ್ದಿ

ಬಿಬಿಎಂಪಿ ಮೈತ್ರಿಗೆ ಕಾಗೋಡು ಅಸಮಾಧಾನ

ಬಿಬಿಎಂಪಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ಬಗ್ಗೆ ಮೂಲ ಕಾಂಗ್ರೆಸ್ಸಿಗರಿಗಾರಿಗೂ ಇಷ್ಟ ಇಲ್ಲ. ಆದರೆ ಈ ಮೈತ್ರಿಯಿಂದ ಕಾಂಗ್ರೆಸ್ ಲಾಭಕ್ಕಿಂತ ನಷ್ಟವೇ ಹೆಚ್ಚು. ಜೆಡಿಎಸ್‍ಗೆ ಇದು ಅನುಕೂಲವಾಗುತ್ತದೆ ಎಂದು ವಿಧಾನಸಭೆ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅಭಿಪ್ರಾಯಪಟ್ಟಿದ್ದಾರೆ...

ಬಿಬಿಎಂಪಿ ಮೈತ್ರಿಗೆ ಕಾಗೋಡು ಅಸಮಾಧಾನ
ಕರ್ನಾಟಕ ವಿಧಾನಸಭಾ ಸ್ಪೀಕರ್ ಕಾಗೋಡು ತಿಮ್ಮಪ್ಪ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಬಿಬಿಎಂಪಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ಬಗ್ಗೆ ಮೂಲ ಕಾಂಗ್ರೆಸ್ಸಿಗರಿಗಾರಿಗೂ ಇಷ್ಟ ಇಲ್ಲ. ಆದರೆ ಈ ಮೈತ್ರಿಯಿಂದ ಕಾಂಗ್ರೆಸ್ ಲಾಭಕ್ಕಿಂತ ನಷ್ಟವೇ ಹೆಚ್ಚು. ಜೆಡಿಎಸ್‍ಗೆ ಇದು ಅನುಕೂಲವಾಗುತ್ತದೆ ಎಂದು ವಿಧಾನಸಭೆ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್‍ಗೆ ಅಧಿಕಾರ ಇರುವುದು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮೇಲೆ ಟೀಕೆ ಮಾಡುವವರೊಂದಿಗೇ ಸೇರಿಕೊಳ್ಳುವುದು ಸರಿಯಲ್ಲ. ಈ ಮೈತ್ರಿಯಿಂದ ಕಾಂಗ್ರೆಸ್‍ಗೆ ಲಾಭವಾಗುವುದಿಲ್ಲ. ದೇವೇಗೌಡ ಈ ಮೈತ್ರಿಗೆ ಒಪ್ಪಿದ್ದಾರೆ. ಅವರು ಭಾರೀ ಲೆಕ್ಕಾಚಾರವನ್ನು ಮಾಡಿಯೇ ಇದಕ್ಕೆಲ್ಲ ಒಪ್ಪಿದ್ದಾರೆ. ಅವರಿಗೆ ಚಾನ್ಸ್ ಸಿಕ್ಕಿದೆ. ಈಗ ಆಟ ಆಡಿಸುತ್ತಾರೆ. ಅವರ ಮುಂದೆ ಹೋಗಿ ಕೇಳಿಕೊಳ್ಳುವ ಪ್ರಕ್ರಿಯೆ ಸರಿಯಾದುದಲ್ಲ. ಕಾಂಗ್ರೆಸ್‍ಗೆ ಇದು ಭಾರೀ ಹೊಡೆತ ಎಂದು ಬುಧವಾರ ಸುದ್ದಿಗಾರರ ಜೊತೆ ಅನಿಸಿಕೆ ಹಂಚಿಕೊಂಡರು.

ಈ ಮೈತ್ರಿಯ ಬಗ್ಗೆ ಇನ್ನಷ್ಟು ಯೋಚನೆ ಮಾಡಬಹುದಿತ್ತು. ಅಧಿಕಾರಕ್ಕಾಗಿ ಹೀಗೆ ಮಾಡಿರುವುದು ಸರಿ ಅಲ್ಲ. ಕಾಂಗ್ರೆಸ್‍ನ ಎಲ್ಲರಿಗೂ ಈ ಮೈತ್ರಿ ಬಗ್ಗೆ ಸಮಾಧಾನ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀರ್ಮಾನ ಮೇಲೆ ಪರೋಕ್ಷವಾಗಿ ಆಕ್ಷೇಪ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.