ಜಿಲ್ಲಾ ಸುದ್ದಿ

ಬೆಂಗಳೂರಿಗರಿಗೆ ಬೆಸ್ಕಾಂ ಶಾಕ್: ಪ್ರತಿದಿನ 3 -4 ತಾಸು ಲೋಡ್ ಶೆಡ್ಡಿಂಗ್

ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ಬೆಂಗಳುರಿಗರಿಗೆ ಮತ್ತೆ ಶಾಕ್ ನೀಡಿದ್ದು ಪ್ರತಿ ದಿನ ಗಂಟೆಗೆ ಬದಲಾಗಿ ಮೂರು ಗಂಟೆ ವಿದ್ಯುತ್ ಕಡಿತಗೊಳಿಸುವುದಾಗಿ(ಲೋಡ್ ಶೆಡ್ಡಿಂಗ್) ಹೇಳಿದೆ.

ಬೆಂಗಳೂರಿಗರಿಗೆ ಬೆಸ್ಕಾಂ ಶಾಕ್: ಪ್ರತಿದಿನ 3 -4 ತಾಸು ಲೋಡ್ ಶೆಡ್ಡಿಂಗ್
ಲೋಡ್ ಶೆಡ್ಡಿಂಗ್
Published On :

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ಬೆಂಗಳೂರಿಗರಿಗೆ ಮತ್ತೆ ಶಾಕ್ ನೀಡಿದ್ದು ಪ್ರತಿ ದಿನ 2 ಗಂಟೆಗೆ ಬದಲಾಗಿ 3 ಗಂಟೆ ವಿದ್ಯುತ್ ಕಡಿತಗೊಳಿಸುವುದಾಗಿ ಹೇಳಿದೆ.

ತಕ್ಷಣವೇ ಜಾರಿಗೆ ಬರುವಂತೆ ಬೆಸ್ಕಾಂ ಆದೇಶ ಹೊರಡಿಸಿದ್ದು, ಬೆಳಿಗ್ಗೆ 6 ರಿಂದ ರಾತ್ರಿ 9 ರ ನಡುವೆ ಮೂರು ತಾಸು ಲೋಡ್ ಶೆಡ್ಡಿಂಗ್ ಮಾಡುವುದಾಗಿ ಬೆಸ್ಕಾಂ ವೆಬ್ ಸೈಟ್ ಮಾಹಿತಿ ನೀಡಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮೂರು ಗಂಟೆಗಳ ಕಾಲ ಹಾಗೂ ಗ್ರಾಮೀಣ ಭಾಗದಲ್ಲಿ ನಾಲ್ಕು ಗಂಟೆಗಳ ಕಾಲ ವಿದ್ಯುತ್ ಕಡಿತ ಜಾರಿಯಾಗಿದ್ದು, ಬೆಳಿಗ್ಗೆ 6 - 11, 11 - ಸಂಜೆ 4 , 4 -9 ಗಂಟೆಗಳ ನಡುವೆ ಮೂರು ಗಂಟೆಗಳು ವಿದ್ಯುತ್ ಇರುವುದಿಲ್ಲ.  ಬೆಳಿಗ್ಗೆ ಮಧ್ಯಾಹ್ನ, ಸಂಜೆ ಒಂದು ಗಂಟೆಗಳ ಕಾಲ ವಿದ್ಯುತ್ ಕಡಿತ ಜಾರಿಯಾಗಲಿದ್ದು ಈ ವೇಳಾಪಟ್ಟಿ ಮುಂದಿನ ವಾರದ ವರೆಗೆ ಜಾರಿಯಲ್ಲಿರುತ್ತದೆ.

ಕರ್ನಾಟಕದ 8 ಜಿಲ್ಲೆಗಳಿಗೆ ಬೆಸ್ಕಾಂ ನಿಂದ ವಿದ್ಯುತ್ ಪೂರೈಕೆಯಾಗುತ್ತಿದ್ದು ಉಳಿದ ಭಾಗಗಳಲ್ಲಿ ಪ್ರತಿ ದಿನ 4 ಗಂಟೆ ವಿದ್ಯುತ್ ಇರುವುದಿಲ್ಲ. ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕ ಸಮಸ್ಯೆಗಳು ಮತ್ತು ನಿರ್ವಹಣೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿರುವುದರಿಂದ ವಿದ್ಯುತ್ ಉತ್ಪಾದನೆ ಕುಂಟಿತವಾಗಿದೆ. ಈ ಹಿನ್ನೆಲೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ ಎಂದು  ಬೆಸ್ಕಾಂ ನ ಪ್ರಧಾನ ವ್ಯವಸ್ಥಾಪಕಿ ಜಯಂತಿ ತಿಳಿಸಿದ್ದಾರೆ. ಪರಿಸ್ಥಿತಿ ಸುಧಾರಿಸಿದ ನಂತರ ಲೋಡ್ ಶೆಡ್ಡಿಂಗ್ ಅವಧಿ ಕಡಿಮೆಗೊಳಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.