ಹಣಕ್ಕಾಗಿ ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ
ಮಾರಕಾಸ್ತ್ರಗಳಿಂದ ಹಲ್ಲೆ ಟಿವಿ ಕೇಬಲ್ ಸಂಸ್ಥೆಯಲ್ಲಿ ಕೆಲಸ ಮಾಡುವ ನಾಲ್ವರು ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ...

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ಟಿವಿ ಕೇಬಲ್ ಸಂಸ್ಥೆಯಲ್ಲಿ ಕೆಲಸ ಮಾಡುವ ನಾಲ್ವರು ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಣಸವಾಡಿಯಲ್ಲಿ ನಡೆದಿದೆ. ಸೆ.1ರಂದು ಸ್ನೇಹಿತರಿಂದಲೇ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಣಸವಾಡಿ ನಿವಾಸಿ ದಿಲೀಪ್(31) ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾನೆ.
ಈ ಸಂಬಂಧ ರಾಮಸ್ವಾಮಿ ಪಾಳ್ಯ ನಿವಾಸಿ ರವಿ (24), ಜೀವನಹಳ್ಳಿ ನಿವಾಸಿ ಪ್ರತಾಪ್ (25), ಫ್ರೇಜರ್ ನ್ ನಿವಾಸಿ ಸಂತೋಷ್ (23) ನನ್ನು ಪೆÇಲೀಸರು ಬಂಧಿಸಿದ್ದಾರೆ. ಹಾಡಹಗಲೇ ಇರಿದು ದರೋಡೆ: ಹಾಡಹಗಲೇ ಗ್ಯಾಸ್ ಏಜೆನ್ಸಿ ಉದ್ಯೋಗಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು ರೂ. 12 ಸಾವಿರ ನಗದು ದರೋಡೆ ಮಾಡಿರುವ ಘಟನೆ ದೊಡ್ಡಬೊಮ್ಮಸಂದ್ರದಲ್ಲಿ ಗುರುವಾರ ನಡೆದಿದೆ. ಸಿಂಗಾಪುರ ಲೇಔಟ್ ನಿವಾಸ ರಂಗನಾಥ (37) ಇರಿತಕ್ಕೊಳಗಾ ದವರು. ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ರಂಗನಾಥ ವಿಲೇವಾರಿ ಮಾಡಲು ಸಿಲಿಂಡರ್‍ಗಳನ್ನು ಒಂದೆಡೆ ಇರಿಸಿದ್ದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೈಕ್‍ನಲ್ಲಿ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ಚಾಕುವಿನಿಂದ ಕಾಲು, ಕೈಗೆ ಇರಿದು ರೂ. 12 ಸಾವಿರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸಮೀಪದಲ್ಲೇ ಜನ ಇದ್ದರೂ ದುಷ್ಕರ್ಮಿಗಳ ಬಳಿ ಚಾಕು ಇದ್ದ ಕಾರಣ ಅವರೊಂದಿಗೆ ಸೆಣೆಸಾಡುವ ಪ್ರಯತ್ನ ಮಾಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


