ಸ್ನೇಹಿತನೊಂದಿಗೆ ಅನೈತಿಕ ಸಂಬಂಧ: ಮಗನಿಂದ ತಾಯಿ ಹತ್ಯೆ
ತನ್ನ ಸ್ನೇಹಿತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ತಾಯಿಯನ್ನು ಮಗನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರದ...

ಬೆಂಗಳೂರು: ತನ್ನ ಸ್ನೇಹಿತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ತಾಯಿಯನ್ನು ಮಗನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರದ ಲಗ್ಗೆರೆಯಲ್ಲಿ ನಡೆದಿದೆ.
ರಾಜೇಶ್ವರಿ ಚಿತ್ರದಮಂದಿರದ ಬಳಿ ವಾಸಿಸುತ್ತಿದ್ದ ಸುಶೀಲಮ್ಮ(40)ರನ್ನು ಆಕೆಯ ಮಗ ಶಿವಕುಮಾರ್(20) ನಿನ್ನೆ ಬೆಳಗ್ಗೆ ರುಬ್ಬುವ ಕಲ್ಲಿನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ.
ಈ ಸಂಬಂಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ವಿಚಾರಣೆ ವೇಳೆ, ಆರೋಪಿ ಶಿವಕುಮಾರ, ತಾಯಿ ತನ್ನ ಸ್ನೇಹಿತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಆರೋಪಿಸಿದ್ದಾನೆ.
ಶಿವಕುಮಾರ್ ನಿನ್ನೆ ತನ್ನ ತಾಯಿಯನ್ನು ಕೊಲೆ ಮಾಡಿದ ನಂತರ ಮನೆಗೆ ಬೀಗ ಹಾಕಿಕೊಂಡು ಎಂದಿನಂತೆ ಪೀಣ್ಯದ ಎರಡನೇ ಹಂತದಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಹೋಗಿ, ಸಂಜೆ ಮನೆಗೆ ಬಂದಿದ್ದಾನೆ. ಬಳಿಕ ಮನೆಯ ಬೀಗ ತೆಗೆದು, ಅದನ್ನು ಬೇರೆ ಕಡೆ ಎಸೆದು, ತನ್ನ ತಾಯಯನ್ನು ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ ವ್ಯಕ್ತಿಯೇ ಕೊಲೆ ಮಾಡಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ.
ಶಿವಕುಮಾರ್‌ನೊಂದಿಗೆ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ ಪೊಲೀಸರು, ಮೃತದೇಹವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ಬಳಿಕ ಅನುಮಾನದ ಮೇಲೆ ಪೊಲೀಸರು ಶಿವಕುಮಾರ್‌ನನ್ನು ವಿಚಾರಣೆಗೊಳಪಡಿಸಿದಾಗ, ತಾಯಿಯನ್ನು ತಾನೇ ಕೊಂದಿರುವುದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


