ರಾಘವೇಶ್ವರ ಶ್ರೀಗಳಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು
ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಿ ಮತ್ತೊಬ್ಬ ಮಹಿಳೆ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ...

Published On :
ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಿ ಮತ್ತೊಬ್ಬ ಮಹಿಳೆ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಶುಕ್ರವಾರ 52ನೇ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಕುರಿತಂತೆ ರಾಘವೇಶ್ವರ ಶ್ರೀಗಳಿಗೆ ಜಾಮೀನು ನೀಡಬೇಕು ಎಂದು ಶ್ರೀ ಪರ ವಕೀಲರು ವಾದ ಮಂಡಿಸಿದ್ದರು. ಎರಡು ಕಡೆಯವರ ವಾದ, ಪ್ರತಿವಾದ ಆಲಿಸಿದ ಸೆಷನ್ಸ್ ನ್ಯಾಯಾಧೀಶರಾದ ಜಿಡಿ ಮಹವರ್ಕರ್ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.
ರಾಘವೇಶ್ವರ ಶ್ರೀಗಳಿಗೆ 30 ದಿನಗಳ ಮಧ್ಯಂತರ ನಿರೀಕ್ಷಣಾ ಜಾಮೀನು ಸೆಷನ್ಸ್ ಕೋರ್ಟ್ ನೀಡಿದ್ದು, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruರಾಘವೇಶ್ವರ ಶ್ರೀrape caseಅತ್ಯಾಚಾರ ಪ್ರಕರಣraghaveshwara shreeinterim bailಮಧ್ಯಂತರ ಜಾಮೀನು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


