ಮಹಿಳೆಯರ ಮೇಲೆ ಹಲ್ಲೆ: ಸಿಪಿಐ ಅಮಾನತು
ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಹೊತ್ತಿದ್ದ ಮಹಿಳೆಯರನ್ನು ಸಾರ್ವಜನಿಕವಾಗಿ ಥಳಿಸಿದ ಘಟನೆಗೆ ಸಂಬಂಧಿಸಿ ಖಡೇಬಜಾರ ಠಾಣೆ ಸಿಪಿಐ ಯು.ಎಚ್.ಸಾತೇನಹಳ್ಳಿ ಹಾಗೂ ಓರ್ವ ಎಎಸ್‍ಐ...

ಬೆಳಗಾವಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಹೊತ್ತಿದ್ದ ಮಹಿಳೆಯರನ್ನು ಸಾರ್ವಜನಿಕವಾಗಿ ಥಳಿಸಿದ ಘಟನೆಗೆ ಸಂಬಂಧಿಸಿ ಖಡೇಬಜಾರ ಠಾಣೆ ಸಿಪಿಐ ಯು.ಎಚ್.ಸಾತೇನಹಳ್ಳಿ ಹಾಗೂ ಓರ್ವ ಎಎಸ್‍ಐ, ಇಬ್ಬರು ಮಹಿಳಾ ಪೇದೆಗಳನ್ನು ಅಮಾನತುಗೊಳಿಸಿ ಪೊಲೀಸ್ ಆಯುಕ್ತ ರವಿ ಎಸ್ ಶನಿವಾರ ರಾತ್ರಿ ಆದೇಶಿಸಿದ್ದಾರೆ.
ಇಲ್ಲಿಯವರೆಗೆ ಅಮಾನತುಗೊಂಡ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸಂಖ್ಯೆ ಏಳಕ್ಕೇರಿದೆ. ಎಎಸ್‍ಐ ಎಂ.ಎಸ್.ಖನಗಾಂವಕರ, ಮಹಿಳಾ ಪೇದೆಗಳಾದ ಭಾರತಿ ಚಿಕ್ಕೋಡಿ, ಸುಮಂಗಲಾ ಡೊಂಬರ ಅವರನ್ನು ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಕರಣದ ಹಿನ್ನೆಲೆ: ನಗರದ ಗಣಪತಿ ಗಲ್ಲಿ, ಖಡೇಬಜಾರ, ಮುಂತಾದೆಡೆ ವೇಶ್ಯಾವಾಟಿಕೆ, ಸಣ್ಣಪುಟ್ಟ ಕಳ್ಳತನ ಪ್ರಕರಣಗಳು ನಡೆಯುತ್ತಿವೆ ಎಂಬ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಾರೆಂಬ ಗುಮಾನಿ ಇದ್ದ ಕೆಲ ಮಹಿಳೆಯರನ್ನು ಬಂಧಿಸುವ ಸಂದರ್ಭದಲ್ಲಿ ಶುಕ್ರವಾರ ಸಂಜೆ ಮೂವರು ಪೇದೆಗಳು ಮಹಿಳೆಯರನ್ನು ಬಹಿರಂಗವಾಗಿ ಹಿಗ್ಗಾಮುಗ್ಗಾ ಥಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


