ಶೀಘ್ರ ಹಂತಕರ ಪತ್ತೆ: ಬಿದರಿ ವಿಶ್ವಾಸ
ಡಾ. ಎಂ.ಎಂ. ಕಲಬುರ್ಗಿ ಪ್ರಕರಣವನ್ನು ಆದಷ್ಟು ಶೀಘ್ರ ಭೇದಿಸಿ ಹಂತಕರನ್ನು ಪೊಲೀಸ್ ಇಲಾಖೆ ಪತ್ತೆ ಹಚ್ಚಲಿದೆ ಎಂಬ ವಿಶ್ವಾಸವನ್ನು ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ ಬಿದರಿ ವ್ಯಕ್ತಪಡಿಸಿದ್ದಾರೆ...

ಧಾರವಾಡ: ಡಾ. ಎಂ.ಎಂ. ಕಲಬುರ್ಗಿ ಪ್ರಕರಣವನ್ನು ಆದಷ್ಟು ಶೀಘ್ರ ಭೇದಿಸಿ ಹಂತಕರನ್ನು ಪೊಲೀಸ್ ಇಲಾಖೆ ಪತ್ತೆ ಹಚ್ಚಲಿದೆ ಎಂಬ ವಿಶ್ವಾಸವನ್ನು ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ ಬಿದರಿ ವ್ಯಕ್ತಪಡಿಸಿದ್ದಾರೆ.
ಇಲ್ಲಿಯ ಕಲ್ಯಾಣನಗರದ ಡಾ.ಕಲಬುರ್ಗಿ ನಿವಾಸಕ್ಕೆ ಸೋಮವಾರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ಪೊಲೀಸ್ ಇಲಾಖೆ, ಸಿಐಡಿ ಅಥವಾ ಸಿಬಿಐ ನಿಂದಲೇ ತನಿಖೆ ಆಗಲಿ. ಆದರೆ, ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ತನಿಖಾ ತಂಡಗಳು ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ತನಿಖಾ ತಂಡದ ಮೇಲೆ ಒತ್ತಡ ಹಾಕಬೇಕು ಎಂದರು. ಡಾ. ಕಲಬುರ್ಗಿ ಅವರೊಂದಿಗೆ ತುಂಬ ಹಳೆಯ ಸಂಬಂಧ. ಕಳೆದ 23 ವರ್ಷಗಳಿಂದ ಅಷ್ಟೇ ಅವರ ಸಂಪರ್ಕ ಇರಲಿಲ್ಲ.
ಈ ಘಟನೆಯಿಂದ ದೊಡ್ಡ ಆಘಾತ ಉಂಟಾಗಿದ್ದು, ಸತ್ಯ ಪ್ರತಿಪಾದಕ, ಸಂಶೋಧಕ, ಸಾಹಿತಿಯೊಬ್ಬರ ಅಂತ್ಯ ಈ ರೀತಿ ಕಾಣಬಾರದಿತ್ತು. ಇಡೀ ಸಾಹಿತ್ಯ ವಲಯದಲ್ಲಿ ಅಷ್ಟೇ ಅಲ್ಲ ಇಡೀ ಕರ್ನಾಟಕ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಎಂದು ವಿಷಾದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


