ಜಿಲ್ಲಾ ಸುದ್ದಿ

11ರಂದು ಪಾಲಿಕೆಗೆ ಬಿಜೆಪಿ ಮುತ್ತಿಗೆ

ಕಾಂಗ್ರೆಸ್- ಜೆಡಿಎಸ್ ಅಪವಿತ್ರ ಮೈತ್ರಿ ವಿರುದ್ಧ ಸೆ. 11ರಂದು ಬಿಬಿಎಂಪಿ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮುನಿರಾಜು ಗೌಡ ಹೇಳಿದ್ದಾರೆ...

11ರಂದು ಪಾಲಿಕೆಗೆ ಬಿಜೆಪಿ ಮುತ್ತಿಗೆ
ಬಿಬಿಎಂಪಿ ಕಚೇರಿ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ಅಪವಿತ್ರ ಮೈತ್ರಿ ವಿರುದ್ಧ ಸೆ. 11ರಂದು ಬಿಬಿಎಂಪಿ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮುನಿರಾಜು ಗೌಡ ಹೇಳಿದ್ದಾರೆ.

ಬಿಬಿಎಂಪಿಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸಿ ಜನಾದೇಶ ಪಡೆದಿದ್ದರೂ, ಕಾಂಗ್ರೆಸ್ ಅಕ್ರಮ ಹಾದಿಯಲ್ಲಿ ಅಧಿಕಾರ ಹಿಡಿಯಲು ಮುಂದಾಗಿದೆ. ಇದಕ್ಕೆ ಜೆಡಿಎಸ್ ಕೂಡ ಕೈ ಜೋಡಿಸಿದೆ. ಇಷ್ಟೂ ದಿನ ಜೆಡಿಎಸ್ ಉತ್ತಮ ದಾರಿಯಲ್ಲಿ ಹೋಗುತ್ತದೆ ಎಂದು ಭಾವಿಸಲಾಗಿತ್ತು. ಆದರೆ, ಇದು ಸುಳ್ಳಾಗಿದ್ದು ಜೆಡಿಎಸ್ ನ ಬಣ್ಣ ಬಯಲಾಗಿದೆ. ಆದ್ದರಿಂದ ಇವರಿಬ್ಬರ ವಿರುದ್ದ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿಕೊಂಡು ಬೆಂಗಳೂರು ವಿಭಜನೆ ಮಾಡುತ್ತಿವೆ. ನಗರಕ್ಕೆ ಇರುವ ಖ್ಯಾತಿಯನ್ನು ನಾಶ ಮಾಡುತ್ತಿವೆ. ಇದಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.