ನಗರದಲ್ಲಿ ನಿಲ್ಲದ ಸರಗಳ್ಳರ ಹಾವಳಿ: 2 ಲಕ್ಷದ ಸರ ಕಸಿದು ಕಳ್ಳರು ಪರಾರಿ
ನಗರದಲ್ಲಿ ನಿನ್ನೆ ಏಳು ಕಡೆಗಳಲ್ಲಿ ಸರಗಳ್ಳರು ಅಟ್ಟಹಾಸ ಮೆರೆದ ಬೆನ್ನಲ್ಲೇ ಇಂದು ಬೆಳಿಗ್ಗೆ ಮಾಗಡಿ ರಸ್ತೆಯ ಕೆಹೆಚ್‍ಬಿ...

ಬೆಂಗಳೂರು: ನಗರದಲ್ಲಿ ನಿನ್ನೆ ಏಳು ಕಡೆಗಳಲ್ಲಿ ಸರಗಳ್ಳರು ಅಟ್ಟಹಾಸ ಮೆರೆದ ಬೆನ್ನಲ್ಲೇ ಇಂದು ಬೆಳಿಗ್ಗೆ ಮಾಗಡಿ ರಸ್ತೆಯ ಕೆಹೆಚ್‍ಬಿ ಕಾಲೋನಿಯಲ್ಲಿ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹಾಲು ತೆಗೆದುಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ 2 ಲಕ್ಷ ಮೌಲ್ಯದ ಮಾಂಗಲ್ಯಸರವನ್ನು ಕಸಿದು ಪರಾರಿಯಾಗಿದ್ದಾರೆ.
ಕೆಹೆಚ್‍ಬಿ ಕಾಲೋನಿಯ ಸಾವಿತ್ರಮ್ಮ ಅವರು ಬೆಳಿಗ್ಗೆ 7.50ರಲ್ಲಿ ಹತ್ತಿರದ ಅಂಗಡಿಯಿಂದ ಮನೆಗೆ ಹಾಲು ತೆಗೆದುಕೊಂಡು ನಡೆದುಕೊಂಡು ಹೋಗುತ್ತಿದ್ದಾಗ ಪಲ್ಸರ್ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕತ್ತಿನಲ್ಲಿದ್ದ 80ಗ್ರಾಂ ಮಾಂಗಲ್ಯಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.
ಕಾಮಾಕ್ಷಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿ ದುಷ್ಕರ್ಮಿಗಳ ಪತ್ತೆಗೆ ತೀವ್ರ ಶೋಧ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


