ಜಿಲ್ಲಾ ಸುದ್ದಿ

ಅತ್ಯಾಚಾರ ಪ್ರಕರಣ: ರಾಘವೇಶ್ವರ ಸ್ವಾಮೀಜಿ ಬಂಧನ, ಬಿಡುಗಡೆ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ರಾಮಚಂದ್ರ ಮಠದ ಸ್ವಾಮೀಜಿ ರಾಘವೇಶ್ವರ ಶ್ರೀಯವರನ್ನು...

ಅತ್ಯಾಚಾರ ಪ್ರಕರಣ: ರಾಘವೇಶ್ವರ ಸ್ವಾಮೀಜಿ ಬಂಧನ, ಬಿಡುಗಡೆ
ರಾಘವೇಶ್ವರ ಶ್ರೀ
Published On :

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ರಾಮಚಂದ್ರ ಮಠದ ಸ್ವಾಮೀಜಿ ರಾಘವೇಶ್ವರ ಶ್ರೀಯವರನ್ನು ಬಂಧಿಸಿ, ವಿಚಾರಣೆ ನಡೆಸಿರುವ ಘಟನೆ ವರದಿಯಾಗಿದೆ.

ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನಂತರ ರಾಘವೇಶ್ವರ ಶ್ರೀಗಳನ್ನು ಬಿಡುಗಡೆ ಮಾಡಲಾಗಿದೆ. ವಿಚಾರಣೆ ನಂತರ 5 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಹಾಗೂ ಷರತ್ತಿನ ಮೇಲೆ ನಿರೀಕ್ಷಣಾ ಜಾಮೀನು ಪಡೆದು ರಾಘವೇಶ್ವರ ಸ್ವಾಮೀಜಿ ಬಿಡುಗಡೆಗೊಂಡಿದ್ದಾರೆ.

ಪ್ರೇಮಲತಾ ಎಂಬವರು ದಾಖಲಿಸಿದ್ದ ಅತ್ಯಾಚಾರ ಆರೋಪದ ಮೇಲೆ ಸಿಐಡಿ ಅಧಿಕಾರಿಗಳು ರಾಮಚಂದ್ರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿಯವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು. ರಾಘವೇಶ್ವರ ಭಾರತೀ ಸ್ವಾಮೀಜಿ ವಿರುದ್ಧ ಮತ್ತೊಂದು ಅತ್ಯಾಚಾರದ ದೂರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಗೆ ಬಂದ ಹೊಸನಗರದ ಯುವತಿ, ರಾಘವೇಶ್ವರ ಭಾರತೀ ಶ್ರೀಗಳು ತನ್ನ ಮೇಲೆ 2006ರಿಂದ ಇಲ್ಲಿಯವರೆಗೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ ಎಂದು ದೂರು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.