ವಿದ್ಯುತ್ ಸಮಸ್ಯೆ ಸಿಎಂ ಜತೆ ಎಫ್ ಕೆಸಿಸಿಐ ಚರ್ಚೆ
ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್ ಸಮಸ್ಯೆಯಿಂದ ಕೈಗಾರಿಕಾ ಕ್ಷೇತ್ರದ ಮೇಲಾಗುತ್ತಿರುವ ಪರಿಣಾಮದ ಕುರಿತು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ನಿಯೋಗ ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿಕೊಟ್ಟಿತು.
ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್ ಸಮಸ್ಯೆಯಿಂದ ಕೈಗಾರಿಕಾ ಕ್ಷೇತ್ರದ ಮೇಲಾಗುತ್ತಿರುವ ಪರಿಣಾಮದ ಕುರಿತು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ನಿಯೋಗ ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿಕೊಟ್ಟಿತು.
ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಸಂಘದ ಅಧ್ಯಕ್ಷ ತಲ್ಲಂ ಆರ್.ದ್ವಾರಕನಾಥ್ ನೇತೃತ್ವದ ನಿಯೋಗ, ವಿದ್ಯುತ್ ಕೊರತೆಯಿಂದ ಕೈಗಾರಿಕೆ ಮತ್ತು ವಾಣಿಜ್ಯ ಕ್ಷೇತ್ರವು ಸಮಸ್ಯೆ ಎದುರಿಸುತ್ತಿದ್ದು ಸರ್ಕಾರ ಸಮಸ್ಯೆ ನಿವಾರಿಸಲು ಗಮನ ನೀಡಬೇಕೆಂದು ಕೋರಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಿದ್ಯುತ್ ಕೊರತೆಯಿಂದಾಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಹೆಚ್ಚುವರಿ ವಿದ್ಯುತ್ ಖರೀದಿಗೆ ಎಲ್ಲ ಪ್ರಯತ್ನ ನಡೆಸಲಾಗಿದ್ದು, ಕೆಲವೇ ದಿನಗಳಲ್ಲಿ ಸಮಸ್ಯೆ ಪರಿಹರಿಸಲು ಎಲ್ಲಾ ಕ್ರಮಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ಇದೇ ವೇಳೆ ಎಫ್ ಕೆಸಿಸಿಐನಿಂದ ಆಚರಿಸುವ ಸರ್.ಎಂ.ವಿಶ್ವೇಶ್ವರಯ್ಯ ದಿನಾಚರಣೆಗೆ ಸಿಎಂರನ್ನು ಆಹ್ವಾನಿಸಲಾಯಿತು. ವಿದ್ಯುತ್ ಸಮಸ್ಯೆಯಿಂದಾಗಿ ಕೈಗಾರಿಕೆಗಳು ಸರಿಯಾಗಿ ನಡೆಯದಿರುವುದರಿಂದ ದಿನಕ್ಕೆ 200 ಕೋಟಿ ರು. ನಷ್ಟವಾಗುತ್ತಿದೆ ಎಂದು ಅಂದಾಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

