ಬರ ವಾಸ್ತವ ವರದಿ ಸಲ್ಲಿಸದ ರಾಜ್ಯ ಸರ್ಕಾರ: ಯಡಿಯೂರಪ್ಪ ಆರೋಪ
ರಾಜ್ಯದ ಬರ ಪರಿಸ್ಥಿತಿ, ಬೆಳೆ ನಷ್ಟ ಕುರಿತು ಅಂಕಿ ಅಂಶದ ಸಮೇತ ವಾಸ್ತವ ವರದಿಯನ್ನು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿಯೇ ಇಲ್ಲ...

ಮೈಸೂರು: ರಾಜ್ಯದ ಬರ ಪರಿಸ್ಥಿತಿ, ಬೆಳೆ ನಷ್ಟ ಕುರಿತು ಅಂಕಿ ಅಂಶದ ಸಮೇತ ವಾಸ್ತವ ವರದಿಯನ್ನು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ವಪಕ್ಷಗಳ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದಾಗ ಸಕರಾತ್ಮಕವಾಗಿ ಸ್ಪಂದಿಸಿ, ಅಧ್ಯಯನ ತಂಡ ಕಳುಹಿಸಿ ವರದಿ ಪಡೆದು ಹಣ ಬಿಡುಗಡೆ ಮಾಡುವ ಭರವಸೆ ನೀಡಿದ್ದರು. ಆದರೆ, ರಾಜ್ಯಸರ್ಕಾರ ಈವರೆಗೆ ವಾಸ್ತವ ಸಂಗತಿ ತಿಳಿಸುವ ಪ್ರಯತ್ನ ಮಾಡಿಲ್ಲ ಎಂದು ದೂರಿದರು. ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರವು ಅನುದಾನ ನೀಡುತ್ತಿದೆ. ಹೀಗಿದ್ದರೂ ಬಡವರಿಗೆ ಸರಿಯಾಗಿ ಆಹಾರ ಪದಾರ್ಥ ಸರಬರಾಜು ಮಾಡಲು ಆಗುತ್ತಿಲ್ಲ. ಯೋಜನೆಯನ್ನು ಬರೀ ಪ್ರಚಾರಕ್ಕಾಗಿ ಬಳಸಿಕೊಂಡು, ಸತ್ಯ ಮರೆಮಾಚಿ ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಇನ್ನಾದರೂ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುವುದನ್ನು ರಾಜ್ಯ ಸರ್ಕಾರ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರವು 5 ವರ್ಷದಲ್ಲಿ ರೂ .45,329 ಕೋಟಿ ಸಾಲ ಮಾಡಿತ್ತು. ಆದರೆ, ಹಣಕಾಸು ಬಗ್ಗೆ ಅಪಾರ ಅನುಭವ ಹೊಂದಿರುವ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ ರೂ. 42,329 ಕೋಟಿ ಸಾಲ ಮಾಡಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


