ಜಿಲ್ಲಾ ಸುದ್ದಿ

ಲೋಕಾಯುಕ್ತ ಭ್ರಷ್ಟಾಚಾರ: ಆರೋಪ ಪಟ್ಟಿ ಸಿದ್ಧತೆ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ತನಿಖಾ ತಂಡದ ಪೊಲೀಸರು ಒಂದು ಪ್ರಕರಣದ ಸಂಬಂಧ ಆರೋಪ ಪಟ್ಟಿ ಸಿದ್ಧಪಡಿಸಿದ್ದಾರೆ.

ಲೋಕಾಯುಕ್ತ ಭ್ರಷ್ಟಾಚಾರ: ಆರೋಪ ಪಟ್ಟಿ ಸಿದ್ಧತೆ
ಲೋಕಾಯುಕ್ತ ಭ್ರಷ್ಟಾಚಾರ: ಆರೋಪ ಪಟ್ಟಿ ಸಿದ್ಧತೆ
Published On :

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ತನಿಖಾ ತಂಡದ ಪೊಲೀಸರು ಒಂದು ಪ್ರಕರಣದ ಸಂಬಂಧ ಆರೋಪ ಪಟ್ಟಿ ಸಿದ್ಧಪಡಿಸಿದ್ದಾರೆ.

ಇನ್ನು ಒಂದೆರಡು ದಿನಗಳಲ್ಲಿ ಆರೋಪ ಪಟ್ಟಿಯನ್ನು ಲೋಕಾಯುಕ್ತ ನ್ಯಾಯಾಲಯಕ್ಕೆ ಸಲ್ಲಿಸಲು ಸಿದ್ಧರಿರುವ ಎಸ್ಐಟಿ ಪೊಲೀಸರು ಸರ್ಕಾರದ ಮುಖ್ಯಕಾರ್ಯದರ್ಶಿಯವರ ಅನುಮರಿಗೆ ಕಾಯುತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 11 ಮಂದಿಯನ್ನು ದೀರ್ಘ ವಿಚಾರಣೆಗೆ ಒಳಪಡಿಸಿರುವ ಎಸ್ಐಟಿ ತನಿಖೆಯನ್ನು ಬಹುತೇಕ ಮುಕ್ತಾಯಗೊಳಿಸಿದೆ ಎನ್ನಲಾಗಿದೆ.

ಮತ್ತೊಂದೆಡೆ ತನಿಖೆಯನ್ನು ಮುಂದುವರೆಸಿರುವ ಪೊಲೀಸರ ತಂಡ ಹೈದರಾಬಾದ್ ನಲ್ಲಿ ನ್ಯಾ. ಭಾಸ್ಕರ್ ರಾವ್ ಅವರ ಕುಟುಂಬದ ವ್ಯವಹಾರಗಳನ್ನು ಜಾಲಾಡಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ ಬೆಂಗಳೂರಿಗೆ ಹಿಂದಿರುಗಿದೆ ಎಂದು ಮೂಲಗಳು ತಿಳಿಸಿವೆ.

ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಅವರ ಪುತ್ರ ಸೇರಿ 11 ಮಂದಿ ವಿರುದ್ಧ ಸಾವಿರಾರು ಪುಟಗಳ ಚಾರ್ಜ್ ಶೀಟ್ ಸಿದ್ಧಪಡಿಸಿದೆ. ಈ ಚಾರ್ಜ್ ಶೀಟ್ ಅನ್ನು ನ್ಯಾಯಾಲಯದ ಮುಂದೆ ಸಲ್ಲಿಸುವ ಮುನ್ನ ಅಧಿಕಾರಿಗಳು ಅಂತಿಮ ಪರಿಶೀಲನೆ ನಡೆಸುತ್ತಿದ್ದಾರೆ.

ಆದರೆ ಲೋಕಾ ಪಿಆರ್ ಒ ಆಗಿದ್ದ ರಿಯಾಜ್ ಸರ್ಕಾರಿ ನೌಕರ ಆಗಿರುವುದರಿಂದ ಅವರ ವಿರುದ್ಧ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರದ ಅನುಮತಿ ಅಗತ್ಯ ಇರುವುದರಿಂದ ಎಸ್ಐಟಿ ಅಧಿಕಾರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಸಂಪರ್ಕಿಸಿದ್ದಾರೆ.

ರಿಯಾಜ್ ವಿರುದ್ಧ ಸಿಕ್ಕಿರುವ ಸಾಕ್ಷಿ ಸಮೇತ ಅನುಮತಿಗಾಗಿ ಪತ್ರ ಬರೆದಿದ್ದಾರೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿಗಳಿಂದ ಒಂದೆರಡು ದಿನಗಳಲ್ಲಿ ಅನುಮತಿ ಸಿಗುವ ಸಾಧ್ಯತೆ ಇದೆ. ಅನುಮತಿ ಸಿಕ್ಕ ಬಳಿಕ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.