ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಗಂಟೆ ಅವಧಿಯಲ್ಲಿ 2 ಬಸ್ ಪಲ್ಟಿ
ಮೂರು ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಖಾಸಗಿ ಬಸ್ ಪಲ್ಟಿ...

ಸಾಗರ: ಮೂರು ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಖಾಸಗಿ ಬಸ್ ಪಲ್ಟಿ ಹೊಡೆದಿರುವ ಪ್ರತ್ಯೇಕ ಘಟನೆಗಳು ಮಂಗಳವಾರ ನಡೆದಿದೆ.
ಇಂದು ಬೆಳಿಗ್ಗೆ ಎಂಟು ಗಂಟೆಗೆ ಶಿವಮೊಗ್ಗದಿಂದ ಹೊರಟಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಸಾಗರ ತಾಲೂಕಿನ ಮುಂದಾಳು ಬಳಿ ಪಲ್ಟಿಯಾಗಿ ಬಿದ್ದಿತ್ತು. ಇದರಿಂದ ಸಂಚಾರ ವ್ಯವಸ್ಥೆ 1 ಗಂಟೆ ಅಸ್ತವ್ಯಸ್ತವಾಗಿತ್ತು.
ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್ ಹಾಗೂ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಸ್ ನಲ್ಲಿ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಖಾಸಗಿ ಬಸ್ ಗಳ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಇನ್ನು, ಶಿವಮೊಗ್ಗದ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಮತ್ತೊಂದು ಖಾಸಗಿ ಬಸ್ ಪಲ್ಟಿ ಹೊಡೆದು ಅಪಘಾತಕ್ಕೀಡಾಗಿದೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಗಿಲಾಳ ಬಳಿ ಎದುರು ಬಂದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಪಕ್ಕದಲ್ಲಿದ್ದ ಹಳಕ್ಕೆ ಪಲ್ಟಿ ಹೊಡೆದಿದೆ. ನಾಲ್ವರು ಪ್ರಯಾಣಿಕರಿಗೆ ಗಂಭೀರವಾಗಿ ಗಾಯವಾಗಿದ್ದು, ಇನ್ನುಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


