ಬೆಂಗಳೂರಲ್ಲಿ ಮತ್ತೆ ಎರಡು ಕಡೆ ಸರಗಳ್ಳತನ
ನಗರದಲ್ಲಿ ಗಣೇಶ ಹಬ್ಬದ ಮುನ್ನಾ ದಿನವೇ ಮತ್ತೆ ಸರಗಳ್ಳರ ಹಾವಳಿ ಆರಂಭವಾಗಿದೆ. ಇಂದು ಮಧ್ಯಾಹ್ನ ಕಳ್ಳರು ಕೈಚಳ ತೋರಿಸಿದ್ದಾರೆ. ...

ಬೆಂಗಳೂರು: ನಗರದಲ್ಲಿ ಗಣೇಶ ಹಬ್ಬದ ಮುನ್ನಾ ದಿನವೇ ಮತ್ತೆ ಸರಗಳ್ಳರ ಹಾವಳಿ ಆರಂಭವಾಗಿದೆ. ಇಂದು ಮಧ್ಯಾಹ್ನ ಕಳ್ಳರು ಕೈಚಳ ತೋರಿಸಿದ್ದಾರೆ. ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಮಹಿಳೆಯರ ಸರ ಅಪಹರಣ ಮಾಡಲಾಗಿದೆ. ಬಾಲಾಜಿ ಲೇಔಟ್ ನಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿದೆ.
ಶರಾವತಿ ಎಂಬುವರ 40 ಗ್ರಾಂ ಮತ್ತು ತಾರಾಬಾಯಿ ಎಂಬುವರ 70 ಗ್ರಾಂ ಸರವನ್ನು ಅಪಹರಿಸಿದ್ದಾರೆ. ಕಪ್ಪು ಬಣ್ಣದ ಬಜಾಜ್ ಪಲ್ಸರ್ ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಸರಗಳ್ಳರನ್ನು ಹಿಡಿಯಲು ಬೆಂಗಳೂರು ಪೊಲೀಸರು ವಿಶೇಷ ತಂಡ ರಚನೆ ಮಾಡಿದರೂ ಪ್ರಯೋಜನವಾಗುತ್ತಿಲ್ಲ.
ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್ ಪಿ. ಹರಿಶೇಖರನ್ ಮುಂದಾಳತ್ವದಲ್ಲಿ ತಂಡವೊಂದನ್ನು ರಚನೆ ಮಾಡಿದ್ದರೂ ಅಪರಾಧ ಪ್ರಕರಣಗಳಿಗೆ ಅಂಕುಶ ಬಿದ್ದಿಲ್ಲ. ಸೆಪ್ಟೆಂಬರ್ 9 ಮತ್ತು 10 ರಂದು ನಗರದ ವಿವಿಧೆಡೆ ಕೈಚಳಕ ತೋರಿಸಿದ್ದ ಕಳ್ಳರು ಎರಡೇ ದಿನದಲ್ಲಿ 10 ಕಡೆ ಸರಗಳ್ಳತನ ಮಾಡಿದ್ದರು. ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣಗಳ ಮೂಲಕ, ಬ್ಯಾನರ್ ಗಳ ಮೂಲಕವೂ ಸಹ ಜನರಿಗೆ ಎಚ್ಚರಿಕೆ ನೀಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


