ಕಟ್ಟಡದಿಂದ ಬಿದ್ದು ವಿಜ್ಞಾನಿ ಸಾವು
ಅರಣ್ಯ ಮತ್ತು ಪರಿಸರ ಇಲಾಖೆಯ ಪರಿಸರ ವಿಜ್ಞಾನಿಯೊಬ್ಬರು ಅಪಾರ್ಟ್‍ಮೆಂಟ್‍ನ 4ನೇ ಮಹಡಿಯಿಂದ...

ಬೆಂಗಳೂರು: ಅರಣ್ಯ ಮತ್ತು ಪರಿಸರ ಇಲಾಖೆಯ ಪರಿಸರ ವಿಜ್ಞಾನಿಯೊಬ್ಬರು ಅಪಾರ್ಟ್‍ಮೆಂಟ್‍ನ 4ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಪುಲಕೇಶಿನಗರದ ಸ್ಟೀಫನ್ ರಸ್ತೆಯಲ್ಲಿನ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ.
ಸ್ಟೀಫನ್ ರಸ್ತೆ ಭರುಚಾ ಅಪಾರ್ಟ್‍ಮೆಂಟ್‍ನ ಜಾನ್ (55)ಮೃತರು. ಮಂಗಳವಾರ ಬೆಳಿಗ್ಗೆ 3.30ರ ಸುಮಾರಿಗೆ ಮಹಡಿಯಿಂದ ಬಿದ್ದ ಪರಿಣಾಮ ಜಾನ್ ಅವರ ಕೈ ತುಂಡಾಗಿ, ತಲೆಗೆಗಂಭೀರ ಗಾಯವಾಗಿತ್ತು. ರಕ್ತದ ಮಡುವಿನಲ್ಲಿದ್ದುದ್ದನ್ನು ಗಮನಿಸಿ ಅಕ್ಕಪಕ್ಕದವರು ಠಾಣೆಗೆ ಮಾಹಿತಿ ನೀಡಿ ಗಾಯಾಳುವನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದರು.
ಚಿಕಿತ್ಸೆ ಫಲಿಸದೆ ಬೆಳಗ್ಗೆ 9.30ಕ್ಕೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅರಣ್ಯ ಮತ್ತು ಪರಿಸರ ಇಲಾಖೆಯಲ್ಲಿ ಪರಿಸರ ವಿಜ್ಞಾನಿಯಾಗಿದ್ದ ಜಾನ್ ಅವಿವಾಹಿತರಾಗಿದ್ದರು.ಒಂಟಿ ಯಾಗಿ ವಾಸವಿದ್ದರು. ಸಂಬಂಧಿಕರು ಮತ್ತು ಪಾಲಕರಿಂದ ದೂರವಾಗಿದ್ದರು. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬೇಕು ಇಲ್ಲವೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


