ಜಿಲ್ಲಾ ಸುದ್ದಿ

ಸಂಪುಟ ಪುನಾರಚನೆಗೆ ಸಿಕ್ಕಿಲ್ಲ ವರಿಷ್ಠರ ಒಪ್ಪಿಗೆ

ಸಚಿವ ಸಂಪುಟ ಪುನಾರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನಿಲ್ಲದ ಉತ್ಸಾಹ ತೋರುತ್ತಿದ್ದರೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆ ಮಾತ್ರ ಇನ್ನೂ ಸಿಕ್ಕಿಲ್ಲ.

ಸಂಪುಟ ಪುನಾರಚನೆಗೆ ಸಿಕ್ಕಿಲ್ಲ ವರಿಷ್ಠರ ಒಪ್ಪಿಗೆ
ಸಿದ್ದರಾಮಯ್ಯ
Published On :

ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನಿಲ್ಲದ ಉತ್ಸಾಹ ತೋರುತ್ತಿದ್ದರೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆ ಮಾತ್ರ ಇನ್ನೂ ಸಿಕ್ಕಿಲ್ಲ.

ಈ ಬಾರಿ ಬಾರಿ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಯುತ್ತಿರುವುದು ಸಿ.ಎಂ ಸಿದ್ದರಾಮಯ್ಯ ಇಂಗಿತದ ಮೇರೆಗೆ ಹೊರತು ಹೈಕಮಾಂಡ್ ಅಭಿಲಾಷೆ ಪ್ರಕಾರವಲ್ಲ. ತಿಂಗಾಳಾಂತ್ಯಕ್ಕೆ ಸಂಪುಟ ಪುನಾರಚನೆ ಮತ್ತು ವಿಸ್ತರಣೆ ಮಾಡುವುದಾಗಿ ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದರೂ ಈ ಪ್ರಕ್ರಿಯೆಗೆ ಮುನ್ನ ಸೋನಿಯಾ ಗಾಂಧಿಯವರ ಜತೆಗೆ ಚರ್ಚೆ ನಡೆಸುವುದಕ್ಕೆ ಇನ್ನೂ ಸಮಯ ನಿಗದಿಯಾಗಿಲ್ಲ. ಸೋನಿಯಾ ಮತ್ತು ರಾಹುಲ್ ಗಾಂಧಿ ಅವರ ಜತೆ ಚರ್ಚೆಗೆ ಸಮಯ ನಿಗದಿ ಮಾಡುವುದಕ್ಕೆ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ವಿದೇಶ ಪ್ರವಾಸದಲ್ಲಿದ್ದಾರೆ.

ಸೆ.22 ರಂದು ಅವರು ದೆಹಲಿಗೆ ವಾಪಸ್ ಆಗಮಿಸಲಿದ್ದು, ಆ ಬಳಿಕವೇ ಪ್ರಕ್ರಿಯೆಗೆ ಚಾಲನೆ ಲಭಿಸಬಹುದು. ಅದಾಗಿಯೂ ಸಿಎಂ ಸಿದ್ದರಾಮಯ್ಯ ಅವರು ಈ ತಿಂಗಳ 23 ,24 , 25 ರಂದು ದೆಹಲಿಗೆ ತೆರಳಿ ಸೋನಿಯಾ ಗಾಂಧಿಯವರ ಜತೆ ಚರ್ಚೆ ನಡೆಸುವುದಕ್ಕೆ ಸಿದ್ಧತೆ ನಡೆಸಿದ್ದಾರೆ. ಆದರೆ ಸೋನಿಯಾ ಸಮಯಾವಕಾಶ ಲಭ್ಯವಾಗದೇ ಇರುವುದರಿಂದ ಬರಿಗೈಲಿ ವಾಪಸ್ ಬರುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಏಕೆಂದರೆ ಕಳೆದ ವರ್ಷವೂ ಸಂಪುಟ ವಿಸ್ತರಣೆ ನಡೆಸುವುದಾಗಿ ಸಿಎಂ ಘೋಷಿಸಿದ್ದರು. ಆದರೆ ಸೋನಿಯಾ ಭೇಟಿಗೆ ನಿರಾಕರಿಸಿದ್ದರು. ಈ ಮಧ್ಯೆ ರಾಜ್ಯಕ್ಕೆ ಅಕ್ಟೋಬರ್ ನಲ್ಲಿ ರಾಹುಲ್ ಗಾಂಧಿ ಬರುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.