ಜಿಲ್ಲಾ ಸುದ್ದಿ

ಬೈಕ್ ಗೆ ಟಿಪ್ಪರ್ ಡಿಕ್ಕಿ: ಅರ್ಧ ಗಂಟೆ ನಡುರಸ್ತೆಯಲ್ಲೇ ಇದ್ದ ಮೃತದೇಹಗಳು

ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಎರಡು ಶವಗಳು ರಸ್ತೆಯಲ್ಲಿ ಇದ್ದ...

ಬೈಕ್ ಗೆ ಟಿಪ್ಪರ್ ಡಿಕ್ಕಿ: ಅರ್ಧ ಗಂಟೆ ನಡುರಸ್ತೆಯಲ್ಲೇ ಇದ್ದ ಮೃತದೇಹಗಳು
ಅಪಘಾತ
Published On :
ಮಂಗಳೂರು: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಎರಡು ಶವಗಳು ರಸ್ತೆಯಲ್ಲಿ ಇದ್ದ ಘಟನೆ ಮಂಗಳೂರಿನ ಬಜಪೆ ಹುಣಸೆಕಟ್ಟೆ ಬಳಿ ನಡೆದಿದೆ. 
ಬಜಪೆ ಎಕ್ಕಾರು ಸಮೀಪದ ಕಲ್ಲು ಕೊರೆ ಕಾರ್ಮಿಕರಾಗಿದ್ದ ಬಾದಾಮಿ ನಿವಾಸಿ ಶಿವಮೂರ್ತಿ(22) ಹಾಗೂ ಮಡಿಕೇರಿ ನಿವಾಸಿ ಸಂತೋಷ್ ಯಾನೆ ಕೆಂಪ(24) ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 
ಅಪಘಾತ ನಂತರ ಟಿಪ್ಪರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ಸುಮಾರು ಅರ್ಧ ಗಂಟೆ ಕಾಲ ಮೃತದೇಹಗಳು ರಸ್ತೆಯಲ್ಲೇ ಇದ್ದವು. ಬಜಪೆ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.