ಜಿಲ್ಲಾ ಸುದ್ದಿ

ದಸರಾ ಉದ್ಘಾಟನೆಗೆ ಕಡಿದಾಳ್ ನಿರಾಕರಣೆ

ಮೈಸೂರು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ನೀಡಿದ್ದ ಆಹ್ವಾನವನ್ನು ರೈತ ನಾಯಕ ಕಡಿದಾಳ್ ಶಾಮಣ್ಣ...

ದಸರಾ ಉದ್ಘಾಟನೆಗೆ ಕಡಿದಾಳ್ ನಿರಾಕರಣೆ
ಕಡಿದಾಳ್ ಶಾಮಣ್ಣ
Published On :

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ನೀಡಿದ್ದ ಆಹ್ವಾನವನ್ನು ರೈತ ನಾಯಕ ಕಡಿದಾಳ್ ಶಾಮಣ್ಣ ನಿರಾಕರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಖುದ್ದು ಕರೆ ಮಾಡಿ ಆಹ್ವಾನ ನೀಡಿದ್ದರು.

 ಭೀಕರ ಬರದ ಹಿನ್ನೆಲೆಯಲ್ಲಿ ಸರಳ ದಸರಾ ಆಚರಿಸಬೇಕು, ¨ಜತೆಗೆ ಪ್ರಗತಿಪರ ರೈತರಿಂದ ದಸರಾ ಉದ್ಘಾಟಿಸಬೇಕು ಎಂದು ಸಚಿವ ವಿ.ಶ್ರೀನಿವಾಸ್ ಪ್ರಸಾದ್ ನೇತೃತ್ವದ
ದಸರಾ ಸಮಿತಿ ನಿರ್ಧರಿಸಿತ್ತು.

ಎಲ್ಲೆಡೆ ಬರ ಪರಿಸ್ಥಿತಿ ಇದೆ. ರೈತರ ಆತ್ಮಹತ್ಯೆಗಳು ನಡೆಯುತ್ತಿವೆ. ಕಳಸಾ ಬಂಡೂರಿ ಯೋಜನೆಗಾಗಿ ಹೋರಾಟ ನಡೆಯುತ್ತಿದೆ.ಇಂತಹ ಸಂದರ್ಭದಲ್ಲಿ ಮೈಸೂರಿಗೆ ಹೋಗಿ ಉತ್ಸವ ಉದ್ಘಾಟನೆ ಮಾಡೋದು ಸೂಕ್ಷ್ಮ ವಿಚಾರ. ಸಿದ್ದರಾಮಯ್ಯ ಬಗ್ಗೆ ಗೌರವ ಇದೆ. ಆದರೆ, ಈ ಕಾರಣಗಳಿಂದ ಆಹ್ವಾನ ಒಪ್ಪಿಕೊಳ್ಳುವುದಿಲ್ಲ ಎಂದು ಶಾಮಣ್ಣ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.