ಜಿಲ್ಲಾ ಸುದ್ದಿ

ತಿರುಪತಿಗೆ ಹೊರಟ ನಗರದ 4 ಜನ ಅಪಘಾತದಲ್ಲಿ ಸಾವು

ಪ್ರಸಿದ್ಧ ಯಾತ್ರಾ ಸ್ಥಳ ತಿರುಪತಿಗೆ ಹೊರಟಿದ್ದ ಬೆಂಗಳೂರಿನ ನಾಲ್ವರು ಚಿತ್ತೂರು ಜಿಲ್ಲೆಯಲ್ಲಿ ಅಪಘಾತದಲ್ಲಿ ಅಸುನೀಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ...

ತಿರುಪತಿಗೆ ಹೊರಟ ನಗರದ 4 ಜನ ಅಪಘಾತದಲ್ಲಿ ಸಾವು
ಅಪಘಾತ (ಸಾಂದರ್ಭಿಕ ಚಿತ್ರ)
Published On :

ಹೈದರಾಬಾದ್: ಪ್ರಸಿದ್ಧ ಯಾತ್ರಾ ಸ್ಥಳ ತಿರುಪತಿಗೆ ಹೊರಟಿದ್ದ ಬೆಂಗಳೂರಿನ ನಾಲ್ವರು ಚಿತ್ತೂರು ಜಿಲ್ಲೆಯಲ್ಲಿ ಅಪಘಾತದಲ್ಲಿ ಅಸುನೀಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಅವರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಚಿತ್ತೂರು ಜಿಲ್ಲೆಯ ಪನ್ನಮಕುಲಪಲ್ಲಿ ಎಂಬ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಈ ಘಟನೆ ನಡೆದಿದೆ. ಮೃತಪಟ್ಟವರನ್ನು ಭಾಸ್ಕರ್ ಎನ್ (56), ಪತ್ನಿ ಜಾನಕಮ್ಮ (50), ಪುತ್ರ ಮೋಹನ್ (27), ಅವರ ಬಂಧು ಮುರುಗನ್ ಎಂದು  ಗುರುತಿಸಲಾಗಿದೆ. ಅಪಘಾತಕ್ಕೆ ಒಳಗಾದ ವಾಹನದಲ್ಲಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು. ಸಾರಿಗೆ ಸಂಸ್ಥೆ ಬಸ್ಸು ಎದುರಿನಿಂದ ಬರುತ್ತಿದ್ದ ವಾಹನವನ್ನು ಗಮನಿಸದೆ ಓವರ್ ಟೇಕ್  ಮಾಡಲು ಮುಂದಾದಾಗ ಈ ಡಿಕ್ಕಿ ಸಂಭವಿಸಿದೆ.

ಡಿಕ್ಕಿ ರಭಸದಲ್ಲಿ ಬಸ್‍ನಲ್ಲಿದ್ದವರಿಗೂ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಗಂಗಾವರಂ ಠಾಣಾಧಿಕಾರಿ  ದಿಲೀಪ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.