ಜಿಲ್ಲಾ ಸುದ್ದಿ

ಭಾರಿ ಮಳೆಗೆ ಸಂಚಾರ ಅಸ್ತವ್ಯಸ್ತ

ನಗರದಲ್ಲಿ ಎರಡು ತಾಸು ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು. ಕಚೇರಿ ಮುಗಿಸಿಕೊಂಡು ಮನೆಗೆ ತೆರಳಬೇಕಿದ್ದ ನೌಕರರು...

ಭಾರಿ ಮಳೆಗೆ ಸಂಚಾರ ಅಸ್ತವ್ಯಸ್ತ
ಭಾರಿ ಮಳೆ: ಇಂಡಿಯನ್ ಎಕ್ಸ್ ಪ್ರೆಸ್ ಬಸ್ ನಿಲ್ಥಾಣದಲ್ಲಿ ನೆಲಕ್ಕುರುಳಿದ ಮರ
Published On :

ಬೆಂಗಳೂರು: ನಗರದಲ್ಲಿ ಎರಡು ತಾಸು ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು. ಕಚೇರಿ ಮುಗಿಸಿಕೊಂಡು ಮನೆಗೆ ತೆರಳಬೇಕಿದ್ದ ನೌಕರರು, ಶಾಲೆಯಿಂದ ಬರಬೇಕಿದ್ದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮನೆ ಸೇರಲು ಪರದಾಡಿದರು.

ಅದರಲ್ಲೂ ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಪ್ರವಾಹದಂತೆ ಹರಿಯುತ್ತಿದ್ದ ನೀರಿನಲ್ಲಿ ವಾಹನ ಓಡಿಸಲು ಹರಸಾಹಸ ಮಾಡಿದರು. ತಗ್ಗು ಪ್ರದೇಶಗಳು ಜಲಾವೃತಗೊಂಡವು. ಭಾರಿ ಮಳೆಗೆ ಜಯಮಹಲ್ ನಲ್ಲಿ ಮರವೊಂದು ಧರೆಗೆ ಉರುಳಿ ಬೈಕ್ ಜಖಂಗೊಂಡಿದೆ.

ಗುರುವಾರ ಸಂಜೆ 4 ಗಂಟೆಯ ನಂತರ ಆರಂಭವಾದ ಮಳೆ ಸುಮಾರು ಎರಡೂವಾರೆ ತಾಸು ಸುರಿಯಿತು. ಮರದ ಕೊಂಬೆಗಳು ಅಲ್ಲಲ್ಲಿ ಬಿದ್ದವು. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತುರ್ತು ದುರಸ್ತಿ ಕಾರ್ಯ ಕೈಗೊಂಡರು. ಮಳೆಯಿಂ ದಾಗಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.