ಕಿಮ್ಸ್ ಶುಶ್ರೂಷಕಿ, ಆಪರೇಟರ್‍ಗಳ ಧರಣಿ
ಈ ತಿಂಗಳೊಳಗೆ ಸೇವೆ ಕಾಯಂಗೊಳಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಕಿಮ್ಸ್ ಶುಶ್ರೂಷಕಿಯರು, ಕಂಪ್ಯೂಟರ್...

ಬೆಂಗಳೂರು: ಈ ತಿಂಗಳೊಳಗೆ ಸೇವೆ ಕಾಯಂಗೊಳಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಕಿಮ್ಸ್ ಶುಶ್ರೂಷಕಿಯರು, ಕಂಪ್ಯೂಟರ್ ಆಪರೇಟರ್ ಗಳು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶುಶ್ರೂಷಕಿಯರು, ಕಳೆದ ನಾಲ್ಕೈದು ವರ್ಷಗಳಿಂದ 130 ಶುಶ್ರೂಷಕಿಯರು ಹಾಗೂ ಕಂಪ್ಯೂಟರ್ ಆಪರೇಟರ್ ಗಳು ಸೇವೆ ಸಲ್ಲಿಸುತ್ತಿದ್ದರೂ ಕಾಯಂ ಗೊಳಿಸಲು ಆಡಳಿತ ಮಂಡಳಿ ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
2011ರಲ್ಲಿ 1 ವರ್ಷ ತರಬೇತಿ ಸೇರಿದಂತೆ ಮೂರು ವರ್ಷ ಸೇವೆ ಸಲ್ಲಿಸಿದ 28 ಶಶ್ರೂಷಕಿಯರನ್ನು ಅಂದಿನ ಆಡಳಿತಸಲ್ಲಿಸಿದ 28 ಶುಶ್ರೂಷಕಿಯರನ್ನು ಅಂದಿನ ಆಡಳಿತ ಮಂಡಳಿ ಕಾಯಂಗೊಳಿಸಿತ್ತು.
ಅದೇ ರೀತಿ ಕಾಯಂಗೆ ಅಗತ್ಯವಾದ ಎಲ್ಲ ಅರ್ಹತೆಗಳನ್ನು ಹೊಂದಿದ್ದರೂ ಕಾಯಂಗೊಳಿಸುತ್ತಿಲ್ಲ ಎಂದು ಆರೋಪಿಸಿದರು. ಈ ಕುರಿತು ಆಡಳಿತ ಮಂಡಳಿ ಕೇಳಿದರೆ ಹಣದ ಕೊರತೆ ಎಂಬ ಹಾರಿಕೆ ಉತ್ತರ ನೀಡುತ್ತಿದೆ ಎಂದು ದೂರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


