ಜಿಲ್ಲಾ ಸುದ್ದಿ

ವಿಜಯಪುರ: ಬೈಕ್, ಮರಕ್ಕೆ ಟೆಂಪೊ ಟ್ರಾವೆಲರ್ ಡಿಕ್ಕಿ, 4 ಸಾವು

ಟೆಂಪೊ ಟ್ರಾವೆಲರ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸೇರಿದಂತೆ...

ವಿಜಯಪುರ: ಬೈಕ್, ಮರಕ್ಕೆ ಟೆಂಪೊ ಟ್ರಾವೆಲರ್ ಡಿಕ್ಕಿ, 4 ಸಾವು
ಅಪಘಾತಕ್ಕಿಡಾದ ಟೆಂಪೊ ಟ್ರಾವೆಲರ್
Published On :

ವಿಜಯಪುರ: ಟೆಂಪೊ ಟ್ರಾವೆಲರ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸೇರಿದಂತೆ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ತಿಕೋಟಾ ಬಳಿ ಸೋಮವಾರ ನಡೆದಿದೆ.

ಕೆಎ-28, 644 ನಂಬರ್‌ನ ಟೆಂಪೊ ಟ್ರಾವೆಲರ್, ಓವರ್‌ಟೇಕ್ ಮಾಡುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು, ಬಳಿಕ ಮರಕ್ಕೆ ಡಿಕ್ಕಿ ಹೊಡೆದಿದೆ. ಮರಕ್ಕೆ ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು 13 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಕನಕನಮರಡಿ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗುತ್ತಿದ್ದು, ತಿಕೋಟಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.