ಸಂಪುಟ ಸರ್ಜರಿ ಮತ್ತೆ ದಿಲ್ಲಿಗೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರವಾಗಿ ಮತ್ತೆ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರವಾಗಿ ಮತ್ತೆ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ವಿಸ್ತರಣೆ ವಿಚಾರವಾಗಿಯೇ ಚರ್ಚಿಸಲು ದೆಹಲಿಗೆ ತೆರಳಿದ್ದೆ. ಆದರೆ ಆ ಸಂದರ್ಭದಲ್ಲಿ ಪಕ್ಷದ ಉಪಾಧ್ಯಕ್ಷರಾದ ರಾಹುಲ್ ಗಾಂಧಿ ಅವರು ಇರಲಿಲ್ಲ. ಅದೇರೀತಿ ರಾಜ್ಯಉಸ್ತುವಾರಿಯಾಗಿರುವ ದಿಗ್ವಿಜಯ ಸಿಂಗ್ ಕೂಡ ಇರಲಿಲ್ಲ. ಆದ್ದರಿಂದ ಆ ಬಗ್ಗೆ ಚರ್ಚೆಸಲು ಸಾಧ್ಯವಾಗಲಿಲ್ಲ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಸಂಪುಟ ವಿಸ್ತರಣೆಗೆ ಜಿಲ್ಲಾ ಪಂಚಾಯಿತಿ, ಪಿತೃಪಕ್ಷ ಅಂತಾ ಅಲ್ಲ. ಸದ್ಯದಲ್ಲೇ ಮತ್ತೆ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಜತೆ ಚರ್ಚಿಸಲಾಗುವುದು. ಅದು ದಿಗ್ವಿಜಯಸಿಂಗ್ ಅಮೆರಿಕಾದಿಂದ ವಾಪಸಾದ ನಂತರ ಎಂದು ಹೇಳಿದರು.
ಸ್ಥಾನ ಉಳಿಸಿಕೊಳ್ಳುವ ವಿಶ್ವಾಸ
ಜನರ ಮಧ್ಯೆ ಇದ್ದು, ಅವರ ಸಮಸ್ಯೆ ಬಗೆಹರಿಸುವ ತಮ್ಮನ್ನು ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಉಳಿಸಿಕೊಳ್ಳುತ್ತಾರೆಂಬ ನಂಬಿಕೆ ತಮಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ. ಜಯಚಂದ್ರ ತಿಳಿಸಿದರು.
ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಾವು ಜನರ ಮಧ್ಯದಲ್ಲೇ ಬೆಳೆದು ಬಂದವನು. ಜನರ ಸಮಸ್ಯೆ ಅರಿತು ಅವರಿಗೆ ಸ್ಪಂದಿಸುತ್ತಿರುವವನು. ಹೀಗಾಗಿ ಸಂಪುಟ ಪುನರಚನೆ ಅಥವಾ ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗುವ ನಂಬಿಕೆಯಿದೆ. ಸಂಪುಟ ವಿಸ್ತರಣೆ, ಪುನರಚನೆ ಕುರಿತಂತೆ ತಮಗೆ ಮಾಹಿತಿಯಿಲ್ಲ , ಅದೆಲ್ಲಾ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


