ಹುಬ್ಬಳ್ಳಿಯಲ್ಲಿ ಮತ್ತೆ ಪ್ರಣವಾನಂದ ಶ್ರೀ ವಿಚಾರಣೆ
ಸಿಐಡಿ ಅಧಿಕಾರಿಗಳ ತಂಡ ಮಂಗಳವಾರ ರಾಣಿಬೆನ್ನೂರು ತಾಲೂಕು ಆರೆಮಲ್ಲಾಪುರದ ಪ್ರಣವಾನಂದ ಸ್ವಾಮೀಜಿ ....

ಧಾರವಾಡ: ಸಾಹಿತಿ ಡಾ.ಎಂ.ಎಂ ಕಲಬುರ್ಗಿ ಹತ್ಯೆಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ಮಂಗಳವಾರ ರಾಣಿಬೆನ್ನೂರು ತಾಲೂಕು ಆರೆಮಲ್ಲಾಪುರದ ಪ್ರಣವಾನಂದ ಸ್ವಾಮೀಜಿ ಅವರನ್ನು ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಿದೆ.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸಂಜೆ 5ರಿಂದ 7 ವರೆಗೆ ಸುಮಾರು ಎರಡು ತಾಸು ವಿಚಾರಣೆ ನಡೆಸಿದ ಎಸ್ಪಿ ಡಿ.ಸಿ ರಾಜಪ್ಪ ನೇತೃತ್ವದ ಸಿಐಡಿ ತಂಡ, ಅವರ ಮೊಬೈಲ್ ಹಾಗೂ ಲ್ಯಾಪ್ ಟ್ಯಾಪ್ ಅನ್ನು ಪರಿಶೀಲನೆಗೆ ಒಳಪಡಿಸಿತು. ಬಳಿಕ ಅವುಗಳನ್ನು ಮರಳಿಸಿದ ಅಧಿಕಾರಿಗಳು ಮತ್ತೆ ವಿಚಾರಣೆಗೆ ಕರೆದಾಗ ಹಾಜರಾಗುವಂತೆ ಸೂಚಿಸಿದೆ.
ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಣಾವಾನಂದ ಸ್ವಾಮೀಜಿ ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಸಿಐಡಿ ಅಧಿಕಾರಿಗಳು ವಿನಾಕಾರಣ ತಮ್ಮನ್ನು ಆಗಾಗ ಕರೆಸಿ ವಿಚಾರಣೆ ಮಾಡುತ್ತಿದ್ದಾರೆ. ಈ ಸಲ ಆರೋಪಿಗಳ ಬಗ್ಗೆ ಏನಾದರೂ ಮಾಹಿತಿ ಇದೆಯೇ ಎಂದು ಕೇಳಿದ್ದಾರೆ. ಆದರೆ ಸ್ವಾಮೀಜಿಯಾಗಿ ತಾವು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ವಿಧ್ವಂಸಕ ಕೃತ್ಯಗಳನ್ನು ನಡೆಸುವವರ ಸಂಪರ್ಕ ಇಲ್ಲ. ವಿನಾಕಾರಣ ತಮ್ಮ ಮೇಲೆ ಯಾರೋ ಆರೋಪ ಹೊರಿಸುತ್ತಿದ್ದಾರೆ. ಕಲಬುರ್ಗಿ ಅವರ ಕೊಲೆ ಬಗ್ಗೆ ತಮಗೇನು ಗೊತ್ತಿಲ್ಲವೆಂದು ತಿಳಿಸಿದ್ದೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


