ವಿಚಾರವಾದಿಗಳ ಹತ್ಯೆ ಹಿಂದೆ ಸನಾತನ ಇಲ್ಲ: ರಾಮದಾಸ ಕೇಸರಕರ
ದೇಶದಲ್ಲಿ ನಡೆಯುತ್ತಿರುವ ವಿಚಾರವಾದಿಗಳ ಹತ್ಯೆಗಳ ಪ್ರಕರಣದಲ್ಲಿ ಸನಾತನ ಸಂಸ್ಥೆಯನ್ನು ಭಯೋತ್ಪಾದಕ ಸಂಘಟನೆಯಂತೆ ಬಿಂಬಿಸಲಾಗುತ್ತಿದೆ. ಇದರಲ್ಲಿ ಸಂಸ್ಥೆಯ ಕೈವಾಡವಿಲ್ಲ ಎಂದು ಸಂಸ್ಥೆಯ ಕಾನೂನು ಸಲಹೆಗಾರ ರಾಮದಾಸ ಕೇಸರಕರ ಸ್ಪಷ್ಟಪಡಿಸಿದರು...

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ ವಿಚಾರವಾದಿಗಳ ಹತ್ಯೆಗಳ ಪ್ರಕರಣದಲ್ಲಿ ಸನಾತನ ಸಂಸ್ಥೆಯನ್ನು ಭಯೋತ್ಪಾದಕ ಸಂಘಟನೆಯಂತೆ ಬಿಂಬಿಸಲಾಗುತ್ತಿದೆ. ಇದರಲ್ಲಿ ಸಂಸ್ಥೆಯ ಕೈವಾಡವಿಲ್ಲ ಎಂದು ಸಂಸ್ಥೆಯ ಕಾನೂನು ಸಲಹೆಗಾರ ರಾಮದಾಸ ಕೇಸರಕರ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ವಿಚಾರವಾದಿ ಗೋವಿಂದ ಪಾನ್ಸರೆ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಸನಾತನದ ಸದಸ್ಯ ಸಮೀರ ಗಾಯಕವಾಡರನ್ನು ಶಂಕಿತ ಆರೋಪಿಯೆಂದು ಪೊಲೀಸರು ಬಂಧಿಸಿದ ಕಾರಣ ಕೆಲವರು ತಮ್ಮ ಸಂಸ್ಥೆ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ ಸಮೀರ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ವಿನಾಕಾರಣ ಆರೋಪ ಮಾಡಲಾಗುತ್ತಿದ್ದು, ಅದನ್ನು ನಿಲ್ಲಿಸಬೇಕು.
ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ಸಮೀರ ಗಾಯಕವಾಡ ಅಪರಾಧಿ ಎಂಬುದು ಸಾಬೀತಾಗಿಲ್ಲ. ಆದರೆ, ತಪ್ಪಿತಸ್ಥರ ವಿರುದ್ಧ ನ್ಯಾಯಾಲಯ ಕಠಿಣ ಕ್ರಮಕೈಗೊಳ್ಳಲಿ ಎಂದು ಒತ್ತಾಯಿಸಿದರು. ಹಿಂದುತ್ವವನ್ನು ದಮನ ಮಾಡುವ ಉದ್ದೇಶದಿಂದ ಕೆಲವು ಸಂಘಟನೆಗಳು ಸನಾತನ ಸಂಸ್ಥೆಯ ಮೇಲೆ ಆರೋಪ ಮಾಡುತ್ತಿದ್ದಾರೆ. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಸಂಸ್ಥೆ ಕೈವಾಡ ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


