ಬೆಂಕಿ ಆಕಸ್ಮಿಕಕ್ಕೆ 8 ಶಾಲಾ ಬಸ್ ಭಸ್ಮ
ಕೋಣನಕುಂಟೆ ಸಮೀಪದ ಪ್ರತಿಷ್ಠಿತ ಖಾಸಗಿ ಶಾಲೆಯ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಎಂಟು ಶಾಲಾ ಬಸ್ ಗಳು ಬೆಂಕಿಗೆ ಆಹುತಿಯಾಗಿವೆ...

ಬೆಂಗಳೂರು: ಕೋಣನಕುಂಟೆ ಸಮೀಪದ ಪ್ರತಿಷ್ಠಿತ ಖಾಸಗಿ ಶಾಲೆಯ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಎಂಟು ಶಾಲಾ ಬಸ್ ಗಳು ಬೆಂಕಿಗೆ ಆಹುತಿಯಾಗಿವೆ.
ಇಲ್ಲಿನ ದೆಹಲಿ ಪಬ್ಲಿಕ್ ಶಾಲಾ ಆವರಣದಲ್ಲಿ ನಿಲ್ಲಿಸಿದ್ದ ಬಸ್‍ಗಳ ಪೈಕಿ ಒಂದು ಬಸ್‍ನಲ್ಲಿ ಸಂಜೆ 6.45ರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಒಂದರ ಪಕ್ಕ ಒಂದು ಬಸ್ ನಿಂತಿದ್ದ ಕಾರಣ ಬೆಂಕಿ ವೇಗವಾಗಿ ವ್ಯಾಪಿಸತೊಡಗಿತು. ಕೂಡಲೇ ಶಾಲಾ ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ಮತ್ತು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ತಿಳಿಸಿದ್ದಾರೆ.
ಈ ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ನಾಲ್ಕು ವಾಹನಗಳಲ್ಲಿ ತೆರಳಿ ಬೆಂಕಿ ನಂದಿಸಿದ್ದಾರೆ. ಈ ಅವಘಡಕ್ಕೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


