ಸ್ಪೀಡ್ ಗವರ್ನರ್ ಅಳವಡಿಕೆಗೆ ನೋಟಿಸ್
ರಾಜ್ಯದಲ್ಲಿ ಸಾರಿಗೆ ವಾಹನಗಳಿಗೆ ಕಡ್ಡಾಯವಾಗಿ `ಸ್ಪೀಡ್ ಗವರ್ನರ್' ಅಳವಡಿಕೆ ಸಂಬಂಧ ರಾಜ್ಯ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ ಸುರಕ್ಷಿತ ಇಲಾಖೆ ಆಯುಕ್ತರಿಗೆ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ...

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ವಾಹನಗಳಿಗೆ ಕಡ್ಡಾಯವಾಗಿ `ಸ್ಪೀಡ್ ಗವರ್ನರ್' ಅಳವಡಿಕೆ ಸಂಬಂಧ ರಾಜ್ಯ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ ಸುರಕ್ಷಿತ ಇಲಾಖೆ ಆಯುಕ್ತರಿಗೆ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.
ರಾಜ್ಯದ ಎಲ್ಲ ಸಾರಿಗೆ ವಾಹನಗಳಿಗೆ ಕಡ್ಡಾಯವಾಗಿ ಸ್ಪೀಡ್ ಗವರ್ನರ್ (ವೇಗ ನಿಯಂತ್ರಣ ಸಾಧನ) ಅಳವಡಿಸುವ ಕುರಿತು 2015ರ ಆ.11ರಂದು ಹೊರಡಿಸಿರುವ ಅಧಿ ಸೂಚನೆಯನ್ನು ಸಮರ್ಪಕವಾಗಿ ಜಾರಿ ಮಾಡಲು ರಾಜ್ಯ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳುತ್ತಿ
ಲ್ಲ ಎಂದು ಆರೋಪಿಸಿ ಎಚ್‍ಎಎಲ್‍ನ ನಿವೃತ್ತ ನೌಕರ ವೈ.ಎನ್.ನಂಬಪ್ಪ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ.ಎಸ್.ಕೆ.ಮುಖರ್ಜಿ ಮತ್ತು ನ್ಯಾ.ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ಆದೇಶಿಸಿದೆ.
ವಿಚಾರಣೆ ವೇಳೆ ಸರ್ಕಾರಿ ವಕೀಲೆ ನಿಲೋಫರ್ ಅಕ್ಬರ್, ಸ್ಪೀಡ್ ಗವರ್ನರ್ ನಿಯಮ ಜಾರಿಗೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ಕೋರ್ಟ್ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಏಳು ದಿನಗಳಲ್ಲಿ ಅರ್ಜಿ ಕುರಿತು ಆಕ್ಷೇಪಣೆ ಅಥವಾ ಸ್ಪೀಡ್ ಗವರ್ನರ್ ನಿಯಮ ಜಾರಿಗೆ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು 10 ದಿನಗಳ ಕಾಲ ಮುಂದೂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


