ರಾಮನಗರದ ಬಿಡದಿ ಬಳಿ ಅಮರಾವತಿ ಸಿಟಿ: ಕೆ.ಜೆ ಜಾರ್ಜ್
ಆಂಧ್ರಪ್ರದೇಶದ ಉದ್ದೇಶಿತ ರಾಜಧಾನಿ ಅಮರಾವತಿ ಮಾದರಿಯಲ್ಲಿ ಬಿಡದಿಯನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ

ಬೆಂಗಳೂರು: ರಾಜಧಾನಿಯ ಜನಸಂಖ್ಯೆ ಬೆಳವಣಿಗೆ ಹಾಗೂ ವಾಹನ ದಟ್ಟಣೆ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗಾಗಿ ಆಂಧ್ರಪ್ರದೇಶದ ಉದ್ದೇಶಿತ ರಾಜಧಾನಿ ಅಮರಾವತಿ ಮಾದರಿಯಲ್ಲಿ ಬಿಡದಿಯನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಭಾಗವಹಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಗರ ನಿರ್ಮಾಣಕ್ಕೆ ಬಿಡದಿ ಬಳಿ 10 ಸಾವಿರ ಹೆಕ್ಟೇರ್ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭಿಸುವಂತೆ ಸಂಬಂಧ ಪಟ್ಟ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಖಾಸಗಿ ಸಹಭಾಗಿತ್ವದ ಯೋಜನೆಗಳಿಗೆ ಉತ್ತೇಜನ ನೀಡಲು ಸರ್ಕಾರ ಬದ್ಧವಾಗಿದೆ. ಬ್ರಿಟನ್ನಲ್ಲಿ ಇಂಥ ಯೋಜನೆಗಳಿಂದ ಅಲ್ಲಿನ ಆರ್ಥಿಕ ಮತ್ತು ಸಾಮಾಜಿಕ ಚಿತ್ರಣ ಬದಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ ಅಭಿವೃದ್ಧಿಯಾಗಲಿದೆ ಎಂದು ಜಾರ್ಜ್ ತಿಳಿಸಿದರು.
ಸಮಾವೇಶದ ಎರಡನೇ ದಿನವಾದ ಗುರುವಾರ ಇಂಗ್ಲೆಂಡ್ ಜತೆಗಿನ ಒಡಂಬಡಿಕೆ ಸಭೆಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡೆರಹಿತ ರಸ್ತೆ ನಿರ್ಮಾಣ, ಸಕಾಲದಲ್ಲಿ ಮೆಟ್ರೊ ರೈಲು ಸಂಚಾರ ಯೋಜನೆ ಪೂರ್ಣಗೊಳಿಸುವುದು ಸೇರಿ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


