ಜಿಲ್ಲಾ ಸುದ್ದಿ

ರಾಯಚೂರು: ಗ್ಯಾಸ್ ಸಿಲಿಂಡರ್ ಸ್ಪೋಟ, ದಂಪತಿ ಸಜೀವ ದಹನ

ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿಕೊಂಡು ಸಂಭವಿಸಿದ ದುರಂತದಲ್ಲಿ ದಂಪತಿಗಳು ಸಜೀವ ದಹನವಾದ ಘಟನೆ ಮಂಗಳವಾರ...

ರಾಯಚೂರು: ಗ್ಯಾಸ್ ಸಿಲಿಂಡರ್ ಸ್ಪೋಟ, ದಂಪತಿ ಸಜೀವ ದಹನ
ನಾಗಭೂಷಣ - ಇಂದಿರಾ
Published On :
ರಾಯಚೂರು: ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿಕೊಂಡು ಸಂಭವಿಸಿದ ದುರಂತದಲ್ಲಿ ದಂಪತಿಗಳು ಸಜೀವ ದಹನವಾದ ಘಟನೆ ಮಂಗಳವಾರ ಬೆಳಗಿನ ಜಾವ ರಾಯಚೂರಿನ ವಿದ್ಯಾನಗರದಲ್ಲಿ ನಡೆದಿದೆ.
ವಕೀಲ ನಾಗಬಸಪ್ಪ ಅಲಿಯಾಸ್ ನಾಗಭೂಷಣ (50) ಹಾಗೂ ಅವರ ಪತ್ನಿ ಇಂದಿರಾ(45) ಅವರು ದುರಂತದಲ್ಲಿ ಮೃತಪಟ್ಟ ದುರ್ದೃವಿಗಳು. ಅದೃಷ್ಟವಶಾತ್ ಮನೆಯಲ್ಲಿದ್ದ ಪುತ್ರ ವಿನಯ್ ಸುರಕ್ಷಿತವಾಗಿ ಪಾರಾಗಿದ್ದಾರೆ.
ಇಂದು ಬೆಳಗಿನ ಜಾವ 4.30ರ ಸುಮಾರಿಗೆ ಎಚ್ಚರಗೊಂಡ ದಂಪತಿಗಳು, ಅಡುಗೆ ಮನೆಯ ಲೈಟ್ ಹಾಕುತ್ತಿದ್ದಂತೆ ಬೆಂಕಿ ಆವರಿಸಿ, ಇಡಿ ಮನೆಗೇ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬೆಂಕಿಯ ಜ್ವಾಲೆಯಿಂದ ತಪ್ಪಿಸಿಕೊಳ್ಳಲಾಗದೆ ದಂಪತಿಗಳಿಬ್ಬರು ಸಾವನ್ನಪ್ಪಿರಬೇಕೆಂದು ಹೇಳಲಾಗುತ್ತಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಈ ಸಂಬಂಧ ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.