ಬೆಂಗಳೂರಿನಲ್ಲಿ ಮತ್ತೊಂದು ಗ್ಯಾಂಗ್ ರೇಪ್: ಹಾಡಹಗಲೇ ಬ್ಯೂಟಿಶಿಯನ್ ಮೇಲೆ ಸಾಮೂಹಿಕ ಅತ್ಯಾಚಾರ
ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಕೋರಮಂಗಲ ಪೊಲೀಸರು...

ಬೆಂಗಳೂರು: ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಕೋರಮಂಗಲ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೋಲ್ಕೊತಾ ಮೂಲದ 22 ವರ್ಷದ ಯುವತಿಯನ್ನು ಕೋರಮಂಗಲದ ಕರ್ನಾಟಕ ಬ್ಯಾಂಕ್ ಬಳಿ ಫೆಬ್ರವರಿ 2 ರಂದು ಅಪಹರಣ ಮಾಡಲಾಗಿತ್ತು. ಸ್ನೇಹಿತೆಯನ್ನು ಭೇಟಿಯಾಗಲು ಅಶೋಕ ನಗರದಿಂದ ಕೋರಮಂಗಲಕ್ಕೆ ತೆರಳುತ್ತಿದ್ದಾಗ ಕಾರಿನಲ್ಲಿ
ಯುವತಿಯನ್ನು ಎಳೆದೊಯ್ದ ನಾಲ್ವರು ಆರೋಪಿಗಳು ಗೋಡೌನ್ ಒಂದರಲ್ಲಿ ಅತ್ಯಾಚಾರ ನಡೆಸಿದ್ದಾರೆ. ನಂತರ ಹೊಸೂರು ಬಳಿಯ ಆಡುಗೋಡಿ ಬಳಿ ಯುವತಿಯನ್ನು ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.
ಯುವತಿ ಬಳಿಯಿದ್ದ 15 ಸಾವಿರ ರೂ. ಹಣ ಹಾಗೂ ಮೊಬೈಲ್ ದೋಚಿದ ಆರೋಪಿಗಳು ಆಕೆಗೆ ಚಾಕು ತೋರಿಸಿ ಕೂಗಾಡದಂತೆ ಬೆದರಿಸಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ. ಸಂತ್ರಸ್ತೆ ನೀಡಿದ ಮಾಹಿತಿ ಮೇರೆಗೆ ಮೂವರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ, ಇನ್ನೂ ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


