ವೀರ ಯೋಧ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ
ಹುತಾತ್ಮ ಯೋಧ ಸಿಯಾಚಿನ್ ಹೀರೋ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಡರಾತ್ರಿ 25 ಲಕ್ಷ ರೂಪಾಯಿ ಪರಿಹಾರದ ಚೆಕ್

ಹುಬ್ಬಳ್ಳಿ: ಹುತಾತ್ಮ ಯೋಧ ಸಿಯಾಚಿನ್ ಹೀರೋ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಡರಾತ್ರಿ 25 ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದ್ದಾರೆ.
ದೆಹಲಿಯ ಆರ್ಮಿ ಆರ್‌ಆರ್ ಆಸ್ಪತ್ರೆಯಲ್ಲಿ ಹನುಮಂತಪ್ಪ ಕೊಪ್ಪದ ನಿಧನರಾದ ಬಳಿಕ ಅವರ ಪಾರ್ಥಿವ ಶರೀರವನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ. ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ಕೊಪ್ಪದ ಅವರಿಗೆ ಅಂತಿಮ ನಮನ ಸಲ್ಲಿಸಿದ್ದ ಸಿಎಂ ಬಳಿಕ ಮತ್ತೊಮ್ಮೆ ಕಿಮ್ಸ್ ಆಸ್ಪತ್ರೆಯಲ್ಲಿ ಅಂತಿಮ ದರ್ಶನ ಪಡೆದರು. ಬಳಿಕ ಕೊಪ್ಪದ ಅವರ ಕುಟುಂಬ ಸದಸ್ಯರಿಗೆ 25 ಲಕ್ಷ ರೂಪಾಯಿಯ ಚೆಕ್ ವಿತರಿಸಿದರು.
ಚೆಕ್ ವಿತರಿಸಿ ಮಾತನಾಡಿದ ಅವರು, ಕೊಪ್ಪದ ಅವರ ಹೆಸರನ್ನು ನಗರದ ಪ್ರಮುಖ ರಸ್ತೆಗೆ ಇಡಲಾಗುವುದು. ಇನ್ನಿಬ್ಬರು ಹುತಾತ್ಮ ಯೋಧರ ಕುಟುಂಬಕ್ಕೂ 25 ಲಕ್ಷ ರೂಪಾಯಿ ಮೊತ್ತದ ಚೆಕ್, 4 ಎಕರೆ ಜಮೀನು, 1 ನಿವೇಶನ, ಯೋಧರ ಪತ್ನಿಯರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಭರವಸೆ ನೀಡಿದರು.
ಹನುಮಂತಪ್ಪ ಕೊಪ್ಪದ್ ಅವರ ಪಾರ್ಥಿವ ಶರೀರವನ್ನು ಬೆಳಗ್ಗೆ 7 ರಿಂದ 10 ಗಂಟೆಯವರೆಗೂ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


