ಜಿಲ್ಲಾ ಸುದ್ದಿ

ಮತದಾನದ ವೇಳೆ ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

ಳ್ಳಕೆರೆಯ ಗೊಲ್ಲರ ಹಟ್ಟಿಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘರ್ಷಣೆಯಲ್ಲಿ 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ..

ಮತದಾನದ ವೇಳೆ ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ
ಸಾಂದರ್ಭಿಕ ಚಿತ್ರ
Published On :

ಚಿತ್ರದುರ್/ ಬೆಂಗಳೂರು:  ಜಿಲ್ಲಾ ಪಂಚಾಯತ್ ಚುನಾವಣೆಗೆ ಮತದಾನ ನಡೆಯುತ್ತಿರುವ ಚಳ್ಳಕೆರೆಯ ಗೊಲ್ಲರ ಹಟ್ಟಿಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಗುಂಪು ಘರ್ಷಣೆಯಲ್ಲಿ 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಕೆಲವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ವರದಿಯಾಗಿದೆ.

ಉಪಚುನಾವಣೆ ನಡೆಯುತ್ತಿರುವ ದೇವದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿ ಎಂಬಲ್ಲಿ ಮತದಾರರಿಗೆ ಹಂಚಲು ಬೈಕ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 4.20 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದುವರೆಗೂ ಚಿತ್ರದುರ್ಗದ ಒಂದೆಡೆ ಹೊರತು ಪಡಿಸಿದರೆ ಎಲ್ಲೆಡೆ ಶಾಂತಿಯುತ ಮತದಾನ ನಡೆದಿದ್ದು, ಕೆಲವೆಡೆ ಕಾಂಗ್ರೆಸ್‌- ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ಯುದ್ಧ ನಡೆದಿದೆ

ಇನ್ನು ಹೆಬ್ಟಾಳ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚಲು ಯತ್ನಿಸುತ್ತಿದ್ದ ಕಾಂಗ್ರೆಸ್‌ ಬೆಂಬಲಿಗ ಯುವಕನೊಬ್ಬನನ್ನು ಹೆಬ್ಟಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣ ಸ್ವಾಮಿ ಅವರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.