ಜಿಲ್ಲಾ ಸುದ್ದಿ

ರಾಜ್ಯದಲ್ಲಿ ಫಸಲ್ ವಿಮಾ ಯೋಜನೆಗೆ 27ರಂದು ಮೋದಿ ಚಾಲನೆ

ರೈತರ ಆರ್ಥಿಕ ಸಹಾಯಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ 'ಫಸಲ್ ವಿಮಾ ಯೋಜನೆ' ಗೆ ಇದೇ 27ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ...

ರಾಜ್ಯದಲ್ಲಿ ಫಸಲ್ ವಿಮಾ ಯೋಜನೆಗೆ 27ರಂದು ಮೋದಿ ಚಾಲನೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ
Published On :

ಬೆಳಗಾವಿ: ರೈತರ ಆರ್ಥಿಕ ಸಹಾಯಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ 'ಫಸಲ್ ವಿಮಾ ಯೋಜನೆ' ಗೆ ಇದೇ 27ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಈಗಾಗಲೇ ಒಡಿಶಾ ಮತ್ತು ಮಧ್ಯಪ್ರದೇಶಗಳಲ್ಲಿ ಯೋಜನೆಗೆ ಚಾಲನೆ ನೀಡಲಾಗಿದೆ. ಇದೀಗ ಬೆಳಗಾವಿಯಲ್ಲಿ ಯೋಜನೆಗೆ ಚಾಲನೆ ನೀಡುವ ಮೂಲಕ ರಾಜ್ಯದಲ್ಲಿ ಸಮರ್ಪಣೆಯಾಗಲಿದೆ ಪ್ರಹ್ಲಾದ್ ಜೋಶಿ ತಿಳಿಸಿದರು.

ದೇಶಾದ್ಯಂತ ಇಂತಹ 8 ಕಾರ್ಯಕ್ರಮಗಳು ನಡೆಯಲಿವೆ. ಮುಂದಿನ ಎರಡು ವರ್ಷಗಳಲ್ಲಿ ಈ ಯೋಜನೆಯಲ್ಲಿ 50 ಲಕ್ಷ ರೈತರನ್ನು ತೊಡಗಿಸಬೇಕು ಎಂಬುದು ಪ್ರಧಾನಿಗಳ ಉದ್ದೇಶ. ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ 27ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಯಶಸ್ಸಿಗೆ ಈಗಾಗಲೇ 40 ವಿಭಾಗಗಳನ್ನು ರಚಿಸಲಾಗಿದ್ದು ಎಲ್ಲ ವಿಭಾಗಗಳಲ್ಲಿ ಪಕ್ಷದ ಕಾರ್ಯಕರ್ತರು ಶ್ರಮಿಸಿ ರೈತರಲ್ಲಿ ಜಾಗೃಚಿ ಮೂಡಿಸಲಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.